IPL ಮೆಲುಕು: ಮೊದಲ ಆವೃತ್ತಿಯಿಂದ 12ನೇ ಆವೃತ್ತಿಯವರೆಗೆ ಗೆದ್ದವರಾರು? ಮುಗ್ಗರಿಸಿದವರಾರು..?

First Published Aug 27, 2020, 7:15 PM IST

ಬೆಂಗಳೂರು: ಮಿಲಿಯನ್ ಡಾಲರ್ ಟೂರ್ನಿಯಾದ ಐಪಿಎಲ್‌ಗೆ ದಿನಗಣನೆ ಆರಂಭವಾಗಿದೆ. ಚುಟುಕು ಕ್ರಿಕೆಟ್ ಮಹಾಸಂಗ್ರಾಮವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. 2008ರಲ್ಲಿ ಆರಂಭವಾದ ಐಪಿಎಲ್ ಟೂರ್ನಿ ಇದುವರೆಗೆ 12 ಆವೃತ್ತಿಗಳು ಮುಕ್ತಾಯವಾಗಿದ್ದು, 13ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ದೇಶ ಆತಿಥ್ಯವಹಿಸಿದೆ.
ಕಳೆದ 12 ಆವೃತ್ತಿಯ ಐಪಿಎಲ್‌ ಟೂರ್ನಿಯಲ್ಲಿ ಕಪ್ ಎತ್ತಿಹಿಡಿದವರು ಯಾರು? ಫೈನಲ್‌ನಲ್ಲಿ ಮುಗ್ಗರಿಸಿ ಪ್ರಶಸ್ತಿ ವಂಚಿತರಾದವರು ಯಾರು ಎನ್ನುವುದರ ಕ್ವಿಕ್ ರಿಕ್ಯಾಪ್ ಸುವರ್ಣ ನ್ಯೂಸ್.ಕಾಂ ಮಾಡುತ್ತಿದೆ ನೋಡಿ. 
 

2008ರಲ್ಲಿ ರಾಜಸ್ಥಾನ ರಾಯಲ್ಸ್ ಚಾಂಪಿಯನ್‌: ಚೊಚ್ಚಲ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟಿಂಗ್ ಮಾಡಿದ್ದ ಧೋನಿ ನೇತೃತ್ವದ ಸಿಎಸ್‌ಕೆ 5 ವಿಕೆಟ್‌ ಕಳೆದುಕೊಂಡು 163 ರನ್ ಬಾರಿಸಿತ್ತು. ಯೂಸುಪ್‌ ಪಠಾಣ್ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ಶೇನ್‌ ವಾರ್ನ್ ನೇತೃತ್ವದ ರಾಜಸ್ಥಾನ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
undefined
2009ರಲ್ಲಿ ಡೆಕ್ಕನ್ ಚಾರ್ಜರ್ಸ್ ಚಾಂಪಿಯನ್: ಎರಡನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಕ್ಕನ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಹರ್ಷಲ್ ಗಿಬ್ಸ್ ಬಾರಿಸಿದ ಅಜೇಯ(53) ಅರ್ಧಶತಕದ ನೆರವಿನಿಂದ 6 ವಿಕೆಟ್‌ ಕಳೆದುಕೊಂಡು 143 ರನ್ ಬಾರಿಸಿತ್ತು. ಇದಕ್ಕುತ್ತರವಾಗಿ ಆರ್‌ಸಿಬಿ 9 ವಿಕೆಟ್ ಕಳೆದುಕೊಂಡು ಕೇವಲ 137 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಡೆಕ್ಕನ್ ಚಾರ್ಜರ್ಸ್ 6 ರನ್‌ಗಳಿಂದ ಜಯಭೇರಿ ಬಾರಿಸಿತು.
undefined
2010ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: ಮೂರನೇ ಆವೃತ್ತಿ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು ಪ್ರಶಸ್ತಿಗಾಗಿ ಕಾದಾಡಿದವು. ಧೋನಿ ನೇತೃತ್ವದ ಚೆನ್ನೈ ತಂಡ 22 ರನ್‌ಗಳಿಂದ ಗೆದ್ದು ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
undefined
2011ರಲ್ಲಿ ಮತ್ತೆ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: 4ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಸಿಎಸ್‌ಕೆ ತಂಡ 58 ರನ್‌ಗಳಿಂದ ಜಯಭೇರಿ ಬಾರಿಸುವ ಮೂಲಕ ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು.
undefined
2012ರಲ್ಲಿ ಕೋಲ್ಕತ ನೈಟ್‌ ರೈಡರ್ಸ್ ಚಾಂಪಿಯನ್: 5ನೇ ಆವೃತ್ತಿಯ ಐಪಿಎಲ್ ಫೈನಲ್‌ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಕೋಲ್ಕತಾ ನೈಟ್‌ರೈಡರ್ಸ್ ತಂಡಗಳು ಪ್ರಶಸ್ತಿಗಾಗಿ ಸೆಣಸಿದವು. ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಮೂರು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಬಾರಿಗೆ ಐಪಿಎಲ್ ಕಪ್ ಎತ್ತಿ ಹಿಡಿಯಿತು.
undefined
2013ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 6ನೇ ಆವೃತ್ತಿ ಫೈನಲ್‌ನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ 41 ರನ್‌ಗಳಿಂದ ಚೆನ್ನೈ ತಂಡವನ್ನು ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
undefined
2014ರಲ್ಲಿ ಕೋಲ್ಕತಾ ನೈಟ್‌ ರೈಡರ್ಸ್ ಚಾಂಪಿಯನ್: 7ನೇ ಆವೃತ್ತಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗಿದ್ದವು. ಪಂಜಾಬ್ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಗೌತಮ್ ಗಂಭೀರ್ ನೇತೃತ್ವದ ಕೆಕೆಆರ್ ತಂಡ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಅಗಿ ಮೆರೆದಾಡಿತು.
undefined
2015ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 8ನೇ ಆವೃತ್ತಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧೋನಿ ಪಡೆಯನ್ನು 41 ರನ್‌ಗಳಿಂದ ಮಣಿಸಿ ರೋಹಿತ್ ಶರ್ಮಾ ಪಡೆ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತು.
undefined
2016ರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ಚಾಂಪಿಯನ್: 9ನೇ ಆವೃತ್ತಿಯ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಆರ್‌ಸಿಬಿ ತಂಡವನ್ನು 8 ರನ್‌ಗಳಿಂದ ಮಣಿಸಿ ಡೇವಿಡ್‌ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.
undefined
2017ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 10ನೇ ಆವೃತ್ತಿಯ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಎದುರುಬದುರಾಗಿದ್ದವು. ಪುಣೆ ತಂಡವನ್ನು ಒಂದು ರನ್‌ಗಳಿಂದ ರೋಚಕವಾಗಿ ಮಣಿಸಿ ಮುಂಬೈ ಇಂಡಿಯನ್ಸ್ ತಂಡ ಮೂರನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತು.
undefined
2018ರಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಚಾಂಪಿಯನ್: 11ನೇ ಆವೃತ್ತಿಯ ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದ್ದವು. ಹೈದರಾಬಾದ್ ತಂಡವನ್ನು 8 ವಿಕೆಟ್‌ಗಳಿಂದ ಸುಲಭವಾಗಿ ಮಣಿಸಿ ಧೋನಿ ಪಡೆ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
undefined
2019ರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್: 12ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯ ಮತ್ತೊಮ್ಮೆ ಸಾಂಪ್ರದಾಯಿಕ ಎದುರಾಳಿಗಳೆನಿಸಿರುವ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳ ನಡುವಿನ ಕಾದಾಟಕ್ಕೆ ಸಾಕ್ಷಿಯಾಯಿತು. ಕೊನೆಯ ಓವರ್‌ನ ಕೊನೆಯ ಎಸೆತದಲ್ಲಿ ಮುಂಬೈ ಇಂಡಿಯನ್ಸ್‌ ತಂಡ 1 ರನ್‌ಗಳ ರೋಚಕ ಜಯ ಸಾಧಿಸಿ ದಾಖಲೆಯ ನಾಲ್ಕನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.
undefined
click me!