CSK ನಿರ್ಗಮಿಸಿದ ಬೆನ್ನಲ್ಲೇ ಎಲ್ಲಾ ಮಾದರಿ ಕ್ರಿಕೆಟ್‌ನಿಂದ ನಿವೃತ್ತಿಗೆ ಮುಂದಾದ ವ್ಯಾಟ್ಸನ್!

First Published Nov 2, 2020, 7:53 PM IST

ಚೆನ್ನೈ ಸೂಪರ್ ಕಿಂಗ್ಸ್ ಇದೇ ಮೊದಲ ಬಾರಿಗೆ ಪ್ಲೇ ಆಫ್ ಸ್ಥಾನಕ್ಕೇರದೆ ನಿರ್ಗಮಿಸಿದೆ. ಅತ್ತ ಸಿಎಸ್‌ಕೆ ನಾಯಕ ಎಂ.ಎಸ್.ಧೋನಿ ಕೂಡ ಮುಂದಿನ ಐಪಿಎಲ್ ಟೂರ್ನಿಗೆ ತಂಡದಲ್ಲಿ ಮಹತ್ತರ ಬದಲಾವಣೆ ಮಾಡಲು ಮುಂದಾಗಿದ್ದಾರೆ. ಯುವ ಕ್ರಿಕೆಟಿಗರಿಗೆ ಹೆಚ್ಚಿನ ಜವಾಬ್ದಾರಿ ನೀಡುವ ಕುರಿತು ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್‌ಮನ್ ಶೇನ್ ವ್ಯಾಟ್ಸನ್ ಇದೀಗ ನಿವೃತ್ತಿಗೆ ಮುಂದಾಗಿದ್ದಾರೆ.
 

ಚೆನ್ನೈ ಸೂಪರ್ ಕಿಂಗ್ಸ್ ಕಳಪೆ ಪ್ರದರ್ಶನದ ಮೂಲಕ 13ನೇ ಆವೃತ್ತಿ ಐಪಿಎಲ್ ಟೂರ್ನಿಯಿಂದ ನಿರ್ಗಮಿಸಿದೆ. ಪ್ಲೇ ಆಫ್ ಸ್ಥಾನ ಪ್ರವೇಶಿಸದೆ ಚೆನ್ನೈ ದುಬೈನಿಂದ ಮನೆಗೆ ಮರಳಿದೆ.
undefined
ಸಿಎಸ್‌ಕೆ ಸೋಲಿನ ಬೆನ್ನಲ್ಲೇ ಇದೀಗ ತಂಡದ ಬ್ಯಾಟ್ಸ್‌ಮನ್ ಶೇನ್ ವ್ಯಾಟ್ಸನ್ ಎಲ್ಲಾ ಮಾದರಿ ಕ್ರಿಕೆಟ್‌ನಿಂದ ನಿವೃತ್ತಿಗೆ ಮುಂದಾಗಿದ್ದಾರೆ.
undefined
ನಿವೃತ್ತಿ ಕುರಿತು ಶೇನ್ ವ್ಯಾಟ್ಸನ್ ಚೆನ್ನೈ ಸೂಪರ್ ಕಿಂಗ್ಸ್ ಡ್ರೆಸ್ಸಿಂಗ್ ರೂಂನಲ್ಲಿ ಹೇಳಿಕೊಂಡಿದ್ದಾರೆ. ಎಲ್ಲಾ ಮಾದರಿ ಕ್ರಿಕೆಟ್‌ನಿಂದ ವಿದಾಯ ಹೇಳುವುದಾಗಿ ಹೇಳಿ ವ್ಯಾಟ್ಸನ್ ಭಾವುಕರಾಗಿದ್ದಾರೆ.
undefined
ಚೆನ್ನೈ ತಂಡದ ಪರ ಆಡಲು ಅವಕಾಶ ಸಿಕ್ಕಿರುವುದು ನನ್ನ ಕ್ರಿಕೆಟ್ ಜೀವನ ಉತ್ತಮ ಸಮಯ ಎಂದು ವ್ಯಾಟ್ಸನ್ ಬಣ್ಣಿಸಿದ್ದಾರೆ.
undefined
ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಶೇನ್ ವ್ಯಾಟ್ಸನ್ 11 ಪಂದ್ಯದಿಂದ 229 ರನ್ ಸಿಡಿಸಿದ್ದಾರೆ. 2 ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.
undefined
ಐಪಿಎಲ್ ಟೂರ್ನಿಯಲ್ಲಿ ಶೇನ್ ವ್ಯಾಟ್ಸನ್ 3,874 ರನ್ ಸಿಡಿಸಿದ್ದಾರೆ. 30.99ರ ಸರಾಸರಿಯಲ್ಲಿ ಬ್ಯಾಟಿಂಗ್ ಪ್ರದರ್ಶನ ನೀಡಿರುವ ವ್ಯಾಟ್ಸನ್ 4 ಶತಕ ಹಾಗೂ 21 ಅರ್ಧಶತಕ ಸಿಡಿಸಿದ್ದಾರೆ.
undefined
ಬೌಲಿಂಗ್‌ನಲ್ಲಿ ಶೇನ್ ವ್ಯಾಟ್ಸನ್ ಮಿಂಚಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ 92 ವಿಕೆಟ್ ಕಬಳಿಸಿದ್ದಾರೆ. 2018ರ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಚೆನ್ನೈಗೆ ಗೆಲುವು ತಂದುಕೊಟ್ಟಿದ್ದರು.
undefined
ಅಂತಿಮ ಐಪಿಎಲ್ ಟೂರ್ನಿಯಲ್ಲಿ ಶೇನ ವ್ಯಾಟ್ಸನ್ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಇಷ್ಟೇ ಅಲ್ಲ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್ ಸ್ಥಾನ ಪ್ರವೇಶಿಸಿದೆ ಇದೇ ಮೊದಲ ಬಾರಿಗೆ ಟೂರ್ನಿಯಿಂದ ಹೊರಬಿದ್ದಿದೆ.
undefined
click me!