ನೆನಪಿದೆಯಾ ಚೊಚ್ಚಲ ಆವೃತ್ತಿಯ ಐಪಿಎಲ್‌ ಟೂರ್ನಿಯನ್ನು ರಾಜಸ್ಥಾನ ರಾಯಲ್ಸ್ ಗೆದ್ದಿದ್ದು ಹೇಗೆಂದು..?

First Published Sep 2, 2020, 5:07 PM IST

ಬೆಂಗಳೂರು: ಭಾರತದ ಚುಟುಕು ಕ್ರಿಕೆಟ್ ಹಬ್ಬ ಇಂಡಿಯನ್ ಪ್ರೀಮಿಯರ್ ಲೀಗ್ ಕಳೆದ 12 ಆವೃತ್ತಿಗಳನ್ನು ಯಶಸ್ವಿಯಾಗಿ ಮುಗಿಸಿದ್ದು, ಇದೀಗ 13ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಸುವರ್ಣ ನ್ಯೂಸ್.ಕಾಂ ಐಪಿಎಲ್ ಚೊಚ್ಚಲ ಆವೃತ್ತಿಯ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಚಾಂಪಿಯನ್ ಆಗಿದ್ದು ಹೇಗೆ ಎನ್ನುವುದನ್ನು ನಿಮ್ಮ ಮುಂದಿಡುತ್ತಿದೆ ನೋಡಿ.

ಸಾಕಷ್ಟು ಬಲಾಢ್ಯ ತಂಡಗಳ ನಡುವೆ ಶೇನ್ ವಾರ್ನ್ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ 2008ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
undefined
ಯುವ ಪಡೆಯನ್ನೇ ಕಟ್ಟಿಕೊಂಡ ಶೇನ್‌ ವಾರ್ನ್‌ ಬಲಿಷ್ಠ ತಂಡಗಳಿಗೆ ಮಣ್ಣು ಮುಕ್ಕಿಸಿ ತಂಡಕ್ಕೆ ಚಾಂಪಿಯನ್ ಗರಿ ಮುಡಿಸಿದರು.
undefined
ಮುಂಬೈನ ಡಿ.ವೈ ಪಾಟೀಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 3 ವಿಕೆಟ್‌ಗಳಿಂದ ರೋಚಕವಾಗಿ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು.
undefined
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಸಿಎಸ್‌ಕೆ 5 ವಿಕೆಟ್ ಕಳೆದುಕೊಂಡು 163 ರನ್ ಬಾರಿಸಿತ್ತು. ರೈನಾ ಸಿಎಸ್‌ಕೆ ಪರ 43ರನ್ ಬಾರಿಸಿದರೆ, ಯೂಸುಫ್ ಪಠಾಣ್ ಮೂರು ವಿಕೆಟ್ ಪಡೆದಿದ್ದರು.
undefined
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ರಾಜಸ್ಥಾನ ರಾಯಲ್ಸ್ ಆರಂಭಿಕ ಆಘಾತದ ನಡುವೆಯೂ ಯೂಸುಫ್ ಪಠಾಣ್(56) ಬಾರಿಸಿದ ಕೆಚ್ಚೆದೆಯ ಅರ್ಧಶತಕದ ನೆರವಿನಿಂದ 3 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.
undefined
ಫೈನಲ್ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ ಮೂಲಕ ಆಲ್ರೌಂಡ್ ಪ್ರದರ್ಶನ ತೋರಿದ್ದ ಯೂಸುಫ್ ಪಠಾಣ್ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದರು.
undefined
ರಾಯಲ್ಸ್ ತಂಡದ ಸೋಹಿಲ್ ತನ್ವೀರ್ 22 ವಿಕೆಟ್ ಕಬಳಿಸಿವ ಮೂಲಕ ಪರ್ಪಲ್ ಕ್ಯಾಪ್ ಪಡೆಯುವುದರ ಜತೆಗೆ ರಾಜಸ್ಥಾನ ಗೆಲುವಿನಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದರು.
undefined
ಇನ್ನು ರಾಜಸ್ಥಾನ ತಂಡದಲ್ಲಿದ್ದ ಆಲ್ರೌಂಡರ್ ಶೇನ್ ವಾಟ್ಸನ್ 472 ರನ್ ಹಾಗೂ 17 ವಿಕೆಟ್ ಪಡೆಯುವ ಮೂಲಕ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.
undefined
click me!