IPL 2020: ಈ ಸಲ ಪಕ್ಕಾ RCB ಕಪ್ ಗೆಲ್ಲುತ್ತೆ..!
First Published | Aug 10, 2020, 4:15 PM ISTರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಐಪಿಎಲ್ ಆವೃತ್ತಿಗಳಲ್ಲಿ ಕಣಕ್ಕಿಳಿದಿದ್ದರೂ ಚಾಂಪಿಯನ್ ಪಟ್ಟ ಅಲಂಕರಿಸಲು ಇದುವರೆಗೂ ಸಾಧ್ಯವಾಗಿಲ್ಲ. ಮೂರು ಬಾರಿ ಫೈನಲ್ ಪ್ರವೇಶಿಸಿತ್ತಾದರೂ ಕೊನೆಯ ಕ್ಷಣದಲ್ಲಿ ಮುಗ್ಗರಿಸಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಆದರೆ ಈ ಬಾರಿಯ ಆಟಗಾರರ ಹರಾಜಿನಲ್ಲಿ ಬೆಂಗಳೂರು ಮೂಲದ ಫ್ರಾಂಚೈಸಿ ಸಾಕಷ್ಟು ಅಳೆದು ತೂಗಿ ಆಟಗಾರರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. ಯುಎಇನಲ್ಲಿ ಸೆಪ್ಟೆಂಬರ್ 19ರಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ನೆಚ್ಚಿನ ತಂಡ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಈ ಮೂರು ಕಾರಣಗಳಿಂದಾಗಿ RCB ಈ ಬಾರಿ ಕಪ್ ಗೆಲ್ಲಬಲ್ಲ ನೆಚ್ಚಿನ ತಂಡ ಎನಿಸಿದೆ.