ಐತಿಹಾಸಿಕ ಲಕ್ಕುಂಡಿಗೆ ಸರ್ಕಾರದಿಂದ ವಿಶೇಷ ರಕ್ಷಾಕವಚ: ರಿತ್ತಿ ಕುಟುಂಬಕ್ಕೆ ಗುಡ್‌ನ್ಯೂಸ್

Published : Jan 19, 2026, 07:38 AM IST

ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರಿಸಲಾಗಿದ್ದು, ಇವು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ. ಈ ತಾಣಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.

PREV
14
ಐತಿಹಾಸಿಕ ಲಕ್ಕುಂಡಿ ಗ್ರಾಮ

ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆ ಮಾಡಲಾಗುತ್ತಿದ್ದು, ಈ ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

24
ಲಕ್ಕುಂಡಿ ಗ್ರಾಮದ 16 ತಾಣ

ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಉನ್ನತ ಮಟ್ಟದ ಸಲಹಾ ಸಮಿತಿಯ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಲಕ್ಕುಂಡಿ ಗ್ರಾಮದ 16 ತಾಣಗಳನ್ನು ಈಗಾಗಲೇ ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

34
28 ದೇವಸ್ಥಾನ, ಬಾವಿ

ಅದರ ಜತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಎಚ್‌ಕೆ ಪಾಟೀಲರು ತಿಳಿಸಿದರು.

ಇದನ್ನೂ ಓದಿ: ಲಕ್ಕುಂಡಿ ಮಾದರಿಯಲ್ಲಿ ರಾಜ್ಯಾದ್ಯಂತ ಐತಿಹಾಸಿಕ ಸ್ಮಾರಕಗಳ ರಕ್ಷಣೆ: ಸಿದ್ದರಾಮಯ್ಯ

44
ಗಣರಾಜ್ಯೋತ್ಸವದಂದು ಸನ್ಮಾನ

ಇತ್ತೀಚೆಗೆ ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿಯನ್ನು ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಅವರಿಗೆ ಸರ್ಕಾರದಿಂದ ಉದ್ಯೋಗ ಮತ್ತು ಮನೆ ನೀಡುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತಾದ ಅಧಿಕೃತ ಆದೇಶದ ಪತ್ರಗಳನ್ನು ಗಣರಾಜ್ಯೋತ್ಸವದಂದೇ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಭೂಮಿಯಲ್ಲಿ ಸಿಗುವ ಬಂಗಾರವೆಲ್ಲಾ 'ನಿಧಿ' ಅಲ್ಲ, ಇದನ್ನು ಸರ್ಕಾರಕ್ಕೆ ಕೊಡದೇ ನೀವೇ ಇಟ್ಕೋಬಹುದು!

Read more Photos on
click me!

Recommended Stories