ಬೆಂಗಳೂರಿನ 3 ದಿನದ ಮಳೆಗೆ 63 ಬಿಬಿಎಂಪಿ ಕೆರೆಗಳು ಭರ್ತಿ; ಇಲ್ಲಿವೆ ಸುಂದ ಫೋಟೋಗಳು

Published : May 22, 2025, 06:59 PM ISTUpdated : May 22, 2025, 07:01 PM IST

ಕಳೆದ ವಾರದ ಭಾರೀ ಮಳೆಯಿಂದಾಗಿ ಬೆಂಗಳೂರಿನ 63 ಕೆರೆಗಳು ಭರ್ತಿಯಾಗಿವೆ. ಕೆಂಗೇರಿ, ಯಲಹಂಕ ಮತ್ತು ನಾಗೇನಹಳ್ಳಿ ಕೆರೆಗಳು ಸೇರಿದಂತೆ ಒಟ್ಟು 63 ಕೆರೆಗಳು ತುಂಬಿವೆ ಎಂದು ಬಿಬಿಎಂಪಿ ತಿಳಿಸಿದೆ. ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಕೆರೆಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ.

PREV
15
ಬೆಂಗಳೂರಿನ 3 ದಿನದ ಮಳೆಗೆ 63 ಬಿಬಿಎಂಪಿ ಕೆರೆಗಳು ಭರ್ತಿ; ಇಲ್ಲಿವೆ ಸುಂದ ಫೋಟೋಗಳು
ಕೆಂಗೇರಿ ಕೆರೆ

ಬೆಂಗಳೂರು (ಮೇ 22): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಲ್ಲಿ ಮೂರು ದಿನಗಳ ಕಾಲ ಸುರಿದ ಭಾರೀ ಮಳೆಯಿಂದ 63 ಕೆರೆಗಳು ಭರ್ತಿಯಾಗಿವೆ. ಕೆಂಗೇರಿ, ಯಲಹಂಕ ಹಾಗೂ ನಾಗೇನಹಳ್ಳಿ ಕೆರೆ ಸೇರಿದಂತೆ 63 ಕೆರೆಗಳು ತುಂಬಿವೆ ಎಂದು ಬಿಬಿಎಂಪಿ ತಿಳಿಸಿದೆ.

25
ನಾಗೇನಹಳ್ಳಿ ಕೆರೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದೆ. ಜೊತೆಗೆ, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರಿತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ತಿಳಿಸಿದ್ದಾರೆ.

35
ಯಲಹಂಕ ಕೆರೆ

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕೆರೆಗಳ ಒಟ್ಟು ಸಂಗ್ರಹಣಾ ಸಾಮರ್ಥ್ಯವು 32,514 ದಶಲಕ್ಷ ಲೀಟರ್‌ ಗಳಾಗಿದೆ. ಕಳೆದ ಏಪ್ರೀಲ್-2025 ರಲ್ಲಿ ಕೆರೆಗಳ ಒಟ್ಟು ನೀರಿನ ಸಂಗ್ರಹಣೆಯ ಪ್ರಮಾಣವು 10,595 ದಶಲಕ್ಷ ಲೀಟರ್ ಗಳಿಗೆ ಕುಸಿದು ಕೇವಲ 3 ಕೆರೆಗಳಲ್ಲಿ ಮಾತ್ರ ಪೂರ್ಣ ಪ್ರಮಾಣದಲ್ಲಿ ನೀರು ತುಂಬಿತ್ತು. ಸುಮಾರು 63 ಕೆರೆಗಳಲ್ಲಿ ನೀರಿಲ್ಲದೆ ಒಣಗುವ ಹಂತದಲ್ಲಿತ್ತು.

45
ಯಲಹಂಕ ಕೆರೆ

ಇದೀಗ ನಗರದಲ್ಲಿ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ಒಟ್ಟು 26,056 ದಶಲಕ್ಷ ಲೀಟರ್‌ ನಷ್ಟು ನೀರು ಕೆರೆಗಳಲ್ಲಿ ಸಂಗ್ರಹವಾಗಿದ್ದು, ಏಪ್ರೀಲ್-2025ಕ್ಕೆ ಹೋಲಿಸಿದರೆ ನೀರಿನ ಪ್ರಮಾಣ ಸಾಕಷ್ಟು ಹೆಚ್ಚಾಗಿದೆ. ಇದೀಗ ಪಾಲಿಕೆ ವ್ಯಾಪ್ತಿಯ 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿರುತ್ತವೆ.

55
ಬಿಬಿಎಂಪಿ ಆದೇಶ

ತುಂಬಿರುವ ಎಲ್ಲಾ ಕೆರೆಗಳ ತೂಬುಗಳ ಬಳಿ ಹಾಗೂ ಕೆರೆಯಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ. ಕೆರೆಗಳು ನೀರು ಹೋಗುವ ಕಾಲುವೆಗಳಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್ ಸೇರಿದಂತೆ ಇನ್ನಿತರೆ ತ್ಯಾಜ್ಯವನ್ನು ತೆರವುಗೊಳಿಸಲು ಸಿಬ್ಬಂದಿಗಳನ್ನು ನಿಯೋಜಿಸಿ ಸ್ವಚ್ಛತಾ ಕಾರ್ಯವನ್ನು ಮಾಡಲಾಗುತ್ತಿದೆ.

Read more Photos on
click me!

Recommended Stories