ಕಲಬುರಗಿ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ಅಗ್ನಿಶಾಮಕ ವಾಹನ

First Published | Aug 2, 2020, 12:38 PM IST

ಕಲಬುರಗಿ(ಆ.02): ನಗರದ ವಿಮಾನ ನಿಲ್ದಾಣಕ್ಕೆ ಅತ್ಯಾಧುನಿಕ ತಂತ್ರಜ್ಞಾನವುಳ್ಳ 6 ಕೋಟಿ ರು ಮೌಲ್ಯದ ಅಗ್ನಿಶಾಮಕ ವಾಹನ ಸೇರ್ಪಡೆಯಾಗಿದೆ. ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ್‌ ಜಾಧವ್‌ ಅವರು ನಿನ್ನೆ(ಶನಿವಾರ) ವಿಮಾನ ನಿಲ್ದಾಣದ ಸೇವೆಗೆ ಇದನ್ನು ಅರ್ಪಿಸಿದ್ದಾರೆ. 

6 ಕೋಟಿ ರು ವೆಚ್ಚದಲ್ಲಿ ಆಸ್ಟ್ರಿಯಾ ದೇಶದಿಂದ ರೊಸೆನ್‌ ಬೌರ್‌ ಎಂಬ ವೊಲ್ವೋ ಕಂಪೆನಿಯ ಅಗ್ನಿಶಾಮಕ ವಾಹನ ಖರೀದಿಸಿ ತಂದ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ
ಅತಿಹೆಚ್ಚು ಉಷ್ಣಾಂಶ ಶೀತಆದ್ರ್ರತೆ, ಹೊಗೆ, ಧೂಳುಮಯದಂತಹ ಪ್ರತಿಕೂಲ ವಾತಾವರಣದಲ್ಲಿಯೂ ಈ ಅಗ್ನಿಶಾಮಕ ವಾಹನ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಹೊಂದಿದೆ. ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಸಂಪೂರ್ಣ ಸ್ವಯಂಚಾಲಿತ ವಾಹನ ಇದಾಗಿದ್ದು, ಗರಿಷ್ಠ 121 ಕಿಲೋ ಮೀಟರ್‌ ವೇಗದಲ್ಲಿ ಚಲಿಸಲಿದೆ. ಅಗ್ನಿ ಅವಘಡ ಸಂಭವಿಸಿದಾಗ 65 ಮೀಟರ್‌ ದೂರದವರೆಗೆ ನೀರು ಚಿಮುಕಿಸುವ ಶಕ್ತಿ ಇದಕ್ಕಿದೆ.
Tap to resize

ಟ್ಯಾಂಕರ್‍ 6000 ಲೀಟರ್‌ ನೀರು ಸಂಗ್ರಹದ ಸಾಮರ್ಥ್ಯ ಹೊಂದಿದ್ದು, ಕಾರ್ಯಾಚರಣೆ ವೇಳೆ ಕೆಲವೇ ನಿಮಿಷಗಳಲ್ಲಿ 3000 ಲೀಟರ್‌ ಹೊರಚಿಮ್ಮಿಸಿ, ಬೆಂಕಿಯ ಜ್ವಾಲೆಗಳನ್ನು ಶಮನಗೊಳಿಸಲಿದೆ. 800 ಲೀಟರ್‌ ನೊರೆ (ರಾಸಾಯನಿಕ ಮಿಶ್ರಿತ) ಟ್ಯಾಂಕರನ್ನು ಕೂಡ ಒಳಗೊಂಡಿದೆ. ಅಂದರೆ ತೈಲಗಾರ , ವಿಮಾನ ನಿಲ್ದಾಣಗಳಂತಹ ಸ್ಥಳಗಳಲ್ಲಿ ಅತಿವೇಗವಾಗಿ ವ್ಯಾಪಿಸುವ ಬೆಂಕಿಯನ್ನು ನಂದಿಸಲು ಬಳಸುವ ನೊರೆ ಇದಾಗಿದೆ.
ಒಮ್ಮೆಗೆ ಇಡೀ ಅಗ್ನಿ ಅವಘಡ ಪ್ರದೇಶವನ್ನು ನಿಯಂತ್ರಿಸುವ ಹಾಗೂ ವಿಮಾನದ ರನ್‌ ವೇ ಗಳಲ್ಲಿ ಚಲಿಸುತ್ತಲೇ ಕಾರ್ಯಾಚರಿಸುವಂತಹ ಆನೆಬಲ ಇದಕ್ಕಿದೆ ಎಂದು ಸಂಸದ ಡಾ ಉಮೇಶ್‌ ಜಾಧವ್‌ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಲಬುರಗಿ ವಿಮಾನ ನಿಲ್ದಾಣ ನಿರ್ದೇಶಕ ಜ್ಞಾನೇಶ್ವರ್‌ ರಾವ್‌ ರಾಜ್ಯ ಅಗ್ನಿಶಾಮಕ ಇಲಾಖೆ ಅಧಿಕಾರಿ ಮಧು ರಾಠೋಡ್‌, ಏರ್‌ಲೈಸ್ಸ್‌ ಇಲಾಖೆ ಅಧಿಕಾರಿಗಳು ಇದ್ದರು.

Latest Videos

click me!