ಬಳ್ಳಾರಿ(ಏ.10): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದರಿಂದ ಜನರು ಭಯದ ವಾತಾವರಣದಲ್ಲಿ ಬದುಕು ಸಾಗಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎತನ್ಮಧ್ಯೆ ರೋಗಿ ನಂಬರ್ 151 ಕೆಲಸ ಮಾಡುತ್ತಿದ್ದ ಪ್ರದೇಶದಲ್ಲಿ ನೂರಾರು ಜನರು ಓಡಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ರೋಗಿಯ ಮೊಬೈಲ್ ಟ್ರ್ಯಾಕ್ ಮಾಡಿದಾಗ ಬೆಚ್ಚಿ ಬೀಳಿಸುವ ಅಂಶ ಬೆಳಕಿಗೆ ಬಂದಿದೆ.