ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾ ಬಳಸಿ ಚಿತ್ರೀಕರಿಸಿ, 50 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಪ್ರವೇಶಿಸಿದೆ. ಬೆಳಗಾವಿ ಎಸ್‌ಪಿಗೆ ಪತ್ರ ಬರೆದಿರುವ ಆಯೋಗ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚಿಸಿದೆ.
ರಹಸ್ಯವಾಗಿ ಖಾಸಗಿ ಕ್ಷಣ ಸೆರೆ ಹಿಡಿದು ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ವರದಿಯನ್ನು ಕೇಳಿದೆ. ಬೆಳಗಾವಿ ಎಸ್‌ಪಿ ಅವರಿಗೆ ಈ ಸಂಬಂಧ ಪತ್ರ ಬರೆಯಲಾಗಿದೆ.
24
ರಾಜ್ಯ ಮಹಿಳಾ ಆಯೋಗ
ಬೆಳಗಾವಿಯ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣಕ್ಕೆ ರಾಜ್ಯ ಮಹಿಳಾ ಆಯೋಗ ಎಂಟ್ರಿಯಾಗಿದೆ. ಬೆಳಗಾವಿ ಎಸ್‌ಪಿ ಅವರಿಗೆ ಪತ್ರ ಬರೆದಿರುವ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪ್ರಕರಣದ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
34
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ
ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ವರದಿ ನೀಡುವಂತೆ ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಸೂಚಿಸುವಂತೆ ಪತ್ರ ಬರೆಯಲಾಗಿದೆ.
ಸರ್ಕಾರಿ ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಬಳಸಿ, ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಅಧಿಕಾರಿಗೆ 50 ಲಕ್ಷ ರೂಪಾಯಿ ಬೇಡಿಕೆ ಇಟ್ಟ ಯೂಟ್ಯೂಬ್‌ನ ಮೂವರು ನಕಲಿ ಪತ್ರಕರ್ತರನ್ನು, ಮಾಳಮಾರುತಿ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿರುತ್ತದೆ.