5 ತಿಂಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು ಫ್ಲೈಓವರ್ ನಿರ್ಮಿಸಲು ಟೆಂಡರ್ ಕರೆದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದು, ತೆರಿಗೆ ಹಣ ಪೋಲಾಗುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.
ಕೇವಲ 5 ತಿಂಗಳ ಹಿಂದೆಯಷ್ಟೇ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ವೈಟ್ ಟಾಪಿಂಗ್ ರಸ್ತೆಯನ್ನು ಅಗೆದು, ಅದೇ ಜಾಗದಲ್ಲಿ ಫ್ಲೈಓವರ್ ನಿರ್ಮಿಸಲು ಟೆಂಡರ್ ಆಹ್ವಾನಿಸುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣಬೈರೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
24
ಸಾರ್ವಜನಿಕರ ಆಕ್ರೋಶ
ಮಿನರ್ವಾ ಸರ್ಕಲ್‌ನಿಂದ ಟೌನ್ ಹಾಲ್ ವರೆಗೆ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಿದ ವೈಟ್ ಟಾಪಿಂಗ್ ರಸ್ತೆಯಲ್ಲೇ ಈಗ ಫ್ಲೈಓವರ್ ಕಾಮಗಾರಿಗೆ ಟೆಂಡರ್ ಕರೆದಿರುವುದು ಸಾರ್ವಜನಿಕರ ತೆರಿಗೆ ದುಡ್ಡನ್ನು ಬೇಕಾಬಿಟ್ಟಿ ಪೋಲು ಮಾಡುವ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. 20 ಕೋಟಿ ಖರ್ಚು ಮಾಡಿ 5 ತಿಂಗಳ ಹಿಂದೆ ನಿರ್ಮಿಸಿದ 2 ಕಿಮೀ ಉದ್ದದ ವೈಟ್ ಟಾಪಿಂಗ್ ರಸ್ತೆ ಮಾಡಲಾಗಿತ್ತು.
34
ಮಹೇಶ್ವರ್ ರಾವ್ ಹೇಳಿದ್ದೇನು?
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವೈಟ್ ಟಾಪಿಂಗ್ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣ ಮಾಡುವ ಬಗ್ಗೆ ಸಾಧಕ ಬಾಧಕಗಳನ್ನ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಚಿವರು ಕೂಡಾ ಈ ಬಗ್ಗೆ ಹೇಳಿದ್ದಾರೆ. ಹೊಸ ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣದ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ತೇವೆ ಎಂದು ಹೇಳಿದ್ದಾರೆ.
ನಗರದ ಟ್ರಾಫಿಕ್ ದಟ್ಟಣೆ ಸಮಸ್ಯೆಗೆ ಧೀರ್ಘಕಾಲದ ಪರಿಹಾರಕ್ಕಾಗಿ ಸುರಂಗ ರಸ್ತೆಯ ಜೊತೆಗೆ 150 ಕಿ.ಮೀ ಉದ್ದದ ಎತ್ತರಿಸಿದ ರಸ್ತೆ (ಎಲಿವೇಟೆಡ್ ರೋಡ್) ನಿರ್ಮಿಸಲಾಗುವುದು. ಪೂರ್ವ ಭಾಗದಿಂದ ಪಶ್ಚಿಮ ಭಾಗವನ್ನು ಸಂಪರ್ಕಿಸಲು ಹಳೇ ಮದ್ರಾಸ್ ರಸ್ತೆಯಿಂದ ಮೈಸೂರು ರಸ್ತೆಯವರೆಗೆ 22 ಕಿ.ಮೀ. ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಮುಂದಿನ ಹಂತದಲ್ಲಿ ಟೆಂಡರ್ ಕರೆಯಲಾಗುತ್ತದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.