RR ನಗರ ಉಪಕದನ: 'ಅಧಿಕಾರಿಗಳು ಅಭ್ಯರ್ಥಿಗಳಿಗೆ ನೆರವು ನೀಡಿದರೆ ಕ್ರಿಮಿನಲ್‌ ಕೇಸ್‌'

Kannadaprabha News   | Asianet News
Published : Oct 01, 2020, 09:37 AM ISTUpdated : Oct 01, 2020, 09:52 AM IST

ಬೆಂಗಳೂರು(ಅ.01): ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ನೆರವಾಗುವ ನಿರ್ಧಾರಗಳನ್ನು ಅಧಿಕಾರಿಗಳು ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಈ ದೂರು ದೃಢಪಟ್ಟರೆ ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

PREV
14
RR ನಗರ ಉಪಕದನ: 'ಅಧಿಕಾರಿಗಳು ಅಭ್ಯರ್ಥಿಗಳಿಗೆ ನೆರವು ನೀಡಿದರೆ ಕ್ರಿಮಿನಲ್‌ ಕೇಸ್‌'

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಎನ್‌.ಮಂಜುನಾಥ ಪ್ರಸಾದ್‌ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಸಭೆ ನಡೆಸಿದರು.

24

ಈ ವೇಳೆ ರಾಜಕೀಯ ಪಕ್ಷದ ಮುಖಂಡರು, ಕೆಲವು ಅಧಿಕಾರಿಗಳು ಚುನಾಯಿತ ಪ್ರತಿನಿಧಿಗಳಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್‌, ಅಧಿಕಾರಿಗಳು ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಹಾಗೂ ಇತರೆ ಚುನಾಯಿತ ಪ್ರತಿನಿಧಿಗಳಿಗೆ ಸಹಕಾರ ನೀಡುತ್ತಿರುವ ಬಗ್ಗೆ ದಾಖಲೆ ನೀಡಿ. ಕೂಡಲೇ ಅಂತಹ ಅಧಿಕಾರಿಯನ್ನು ಅಮಾನತು ಮಾಡಲಾಗುವುದು ಹಾಗೂ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ತಿಳಿಸಿದರು.

34

ಸೆ.29ರಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಅಹಿತಕರ ಘಟನೆ, ದೂರು ಅಥವಾ ಉಲ್ಲಂಘನೆಯಾಗುವ ಬಗ್ಗೆ ಆಧಾರಗಳ ಸಮೇತ ದೂರು ನೀಡಿದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಆ ಕ್ಷೇತ್ರದಲ್ಲಿ ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ ಸೇರಿದಂತೆ ಇನ್ನಿತರೆ ಯಾವುದೇ ಇಲಾಖೆಗಳಿಂದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈ ಬಗ್ಗೆ ಈಗಾಗಲೇ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

44

ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ಬೇರೆಯವರಿಗೆ ಕೊಡುವುದು ಅಥವಾ ತೆಗೆದುಕೊಳ್ಳುವಂತಿಲ್ಲ. ಈ ಬಗ್ಗೆ ಆಟೋಗಳಲ್ಲಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು. ಸಭೆಯಲ್ಲಿ ವಿಶೇಷ ಆಯುಕ್ತ ಜೆ. ಮಂಜುನಾಥ್‌ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

click me!

Recommended Stories