ಬೆಂಗಳೂರು ಖಾಕಿ ಮೇಲೆ ಅತ್ಯಾ*ಚಾರ ಆರೋಪ; ಮದುವೆಯಾಗೋದಾಗಿ ನಂಬಿಸಿ 3 ಬಾರಿ ಬಳಸಿಕೊಂಡ ಇನ್ಸ್‌ಪೆಕ್ಟರ್!

Published : Oct 22, 2025, 11:30 AM IST

ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್, ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಒಂದು ವರ್ಷದಿಂದ ಲೈಂಗಿಕ ಬಳಸಿಕೊಂಡು ನಂತರ ದೌರ್ಜನ್ಯ ಎಸಗಿದ್ದಾರೆಂದು 36 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

PREV
15

ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಖಾಕಿ ಸಮವಸ್ತ್ರ ಧರಿಸಿದ ಅಧಿಕಾರಿಯೊಬ್ಬರ ವಿರುದ್ಧವೇ ಅತ್ಯಾ*ಚಾರದ ಗಂಭೀರ ಆರೋಪ ಕೇಳಿಬಂದಿದೆ. ಡಿ.ಜೆ. ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ಅತ್ಯಾ*ಚಾರ ಎಸಗಿದ್ದಾರೆ ಎಂದು 36 ವರ್ಷದ ಸಂತ್ರಸ್ತ ಮಹಿಳೆಯೊಬ್ಬರು ಡಿಜಿ ಮತ್ತು ಐಜಿಪಿ ಕಚೇರಿಗೆ ದೂರು ನೀಡಿದ್ದಾರೆ. ಅಧಿಕಾರಿಯೊಬ್ಬರ ವಿರುದ್ಧವೇ ಈ ರೀತಿಯ ಗಂಭೀರ ಪ್ರಕರಣ ದಾಖಲಾಗಿರುವುದು ಇಲಾಖೆಗೆ ಮುಜುಗರ ತಂದಿದೆ.

25

ದೂರುದಾರ ಮಹಿಳೆಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದು, ಇನ್ಸ್‌ಪೆಕ್ಟರ್ ಸುನೀಲ್ ಅವರು ಮದುವೆಯಾಗುವ ಆಮಿಷವೊಡ್ಡಿ ಕಳೆದ ಒಂದು ವರ್ಷದಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿರುವುದಾಗಿ ಮಹಿಳೆ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

35

ಪೊಲೀಸ್ ಇನ್ಸ್‌ಪೆಕ್ಟರ್ ಸುನೀಲ್ ಅವರು ಮಹಿಳೆಗೆ, 'ರಿಜಿಸ್ಟರ್ ಮ್ಯಾರೇಜ್ ಆಗುತ್ತೇನೆ' ಎಂದು ಭರವಸೆ ನೀಡಿದ್ದರು. ಅಷ್ಟೇ ಅಲ್ಲದೆ, ಮನೆ ಕೊಡಿಸುವುದಾಗಿ ಮತ್ತು ಬ್ಯೂಟಿ ಪಾರ್ಲರ್ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಆರ್ಥಿಕವಾಗಿಯೂ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

ವಂಚನೆ ಮತ್ತು ಬ್ಲ್ಯಾಕ್‌ಮೇಲ್ ತಂತ್ರ: ಇನ್ಸ್‌ಪೆಕ್ಟರ್ ಸುನೀಲ್ ಅವರು 8ನೇ ಮೈಲಿಯ ಬಳಿ ಇರುವ ತಮ್ಮ ಮನೆ ಮತ್ತು ಹೋಟೆಲ್‌ಗೆ ಸಂತ್ರಸ್ತ ಮಹಿಳೆಯನ್ನು ಕರೆಸಿಕೊಂಡು ಅತ್ಯಾ*ಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಆದರೆ, ಇದೀಗ ಮದುವೆಯಾಗಲು ನಿರಾಕರಿಸಿದ್ದಾರೆ.

45

ಅತ್ಯಾ*ಚಾರದ ಪ್ರಕರಣವಷ್ಟೇ ಅಲ್ಲದೆ, ಸುನೀಲ್ ವಿರುದ್ಧ ಬ್ಲಾಕ್‌ಮೇಲ್ ಆರೋಪಗಳೂ ಕೇಳಿಬಂದಿವೆ. ಮಹಿಳೆಯ ಖಾಸಗಿ ಫೋಟೋ ಮತ್ತು ವೀಡಿಯೊಗಳನ್ನು ಇಟ್ಟುಕೊಂಡು ಅವರು ಬ್ಲಾಕ್‌ಮೇಲ್ ಮಾಡಿದ್ದಾರೆ ಎಂದು ದೂರುದಾರರು ತಿಳಿಸಿದ್ದಾರೆ. 'ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ' ಇನ್ಸ್‌ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದೂ ಆರೋಪಿಸಲಾಗಿದೆ. ಅಲ್ಲದೆ, ಪ್ರತಿ ಬಾರಿ ವೀಡಿಯೊ ಕಾಲ್ ಮಾಡುವಂತೆ ಪೀಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪವನ್ನೂ ಮಹಿಳೆ ಮಾಡಿದ್ದಾರೆ.

55

ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂತ್ರಸ್ತ ಮಹಿಳೆ, ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ (ಡಿಜಿ ಮತ್ತು ಐಜಿಪಿ) ಕಚೇರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಇನ್ಸ್‌ಪೆಕ್ಟರ್ ಸುನೀಲ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. 

ಹಿರಿಯ ಅಧಿಕಾರಿಯ ವಿರುದ್ಧವೇ ಅತ್ಯಾ*ಚಾರ ಮತ್ತು ವಂಚನೆಯಂತಹ ಗಂಭೀರ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಈ ದೂರಿನ ಕುರಿತು ತಕ್ಷಣವೇ ತನಿಖೆ ಕೈಗೊಳ್ಳುವ ಅಗತ್ಯವಿದೆ. ಸಂತ್ರಸ್ತೆಗೆ ನ್ಯಾಯ ಒದಗಿಸುವುದರ ಜೊತೆಗೆ, ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

Read more Photos on
click me!

Recommended Stories