ಕಾಡು ಮಲ್ಲೇಶ್ವರ ಕಡಲೆಕಾಯಿ ಪರಿಷೆ ಅದ್ಧೂರಿ ಆರಂಭ: ಬಸವಣ್ಣಗೆ 800 ಕೆಜಿ ಕಡಲೆ ಶೃಂಗಾರ

First Published Dec 2, 2023, 3:31 PM IST

ಬೆಂಗಳೂರು (ಡಿ.2): ಬೆಂಗಳೂರಿನಲ್ಲಿ ಕಳೆದ 7 ವರ್ಷಗಳಿಂದ ಅದ್ಧೂರಿಯಾಗಿ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯನ್ನು ಕಡಲೆಕಾಯಿ ಪರಿಷೆಯನ್ನು ಆರಂಭಿಸಲಾಗಿದೆ. 2023ನೇ ಸಾಲಿನ ಕಾಡು ಮಲ್ಲೇಶ್ವರ ಸ್ವಾಮಿ ಕಡಲೆಕಾಯಿ ಪರಿಷೆಗೆ ಶನಿವಾರ ಅದ್ಧೂರಿ ಚಾಲನೆ ದೊರೆತಿದೆ. 10ಕ್ಕೂ ಅಧಿಕ ಬಗೆಯ ಕಡಲೆಕಾಯಿ ಆಗಮಿಸಿವೆ.

ಗಂಗಮ್ಮ ದೇವಿ ದೇವಸ್ಥಾನದ ಮುಂಭಾಗದಲ್ಲಿ 20 ಅಡಿ ಅಗಲ, 22 ಅಡಿ ಎತ್ತರದ ನಂದಿ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, 800 ಕೆ.ಜಿ. ಕಡಲೆಕಾಯಿಗಳಿಂದ ಅಲಂಕಾರ ಮಾಡಲಾಗಿದೆ.

ಭ್ರಮರಂಭ ಸಮೇತ ಕಾಡುಮಲ್ಲಿಕಾರ್ಜುನ ದೇವಾಲಯ ಸನ್ನಿಧಿಯಲ್ಲಿ ಮಲ್ಲೇಶ್ವರ ಕಡಲೆಕಾಯಿ ಪರಿಷೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಳೆದ 7 ವರ್ಷಗಳಿಂದ ಕಾಡು ಮಲ್ಲೇಶ್ವರ ಗೆಳಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ನೇತೃತ್ವದಲ್ಲಿ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.

Latest Videos


2023ನೇ ಸಾಲಿನ ಕಾಡು ಮಲ್ಲೇಶ್ವರ ಸ್ವಾಮಿ ಕಡಲೆಕಾಯಿ ಪರಿಷೆಗೆ ಶಾಸಕ ಮುನಿರತ್ನ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಮಹೇಶ್ ಜೋಶಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ಜಂಟಿಯಾಗಿ ಉದ್ಘಾಟನೆ ಮಾಡಿದರು.

ಬಸವನಗುಡಿಯಲ್ಲಿ ಜರುಗುವ ಮಾದರಿಯಲ್ಲಿಯೇ ಇಲ್ಲಿಯೂ ಕಡಲೆಕಾಯಿ ಪರಿಷೆಯನ್ನು ಆಯೋಜಿಸಲಾಗಿದೆ. 10 ವಿವಿಧ ಬಗೆಯ ಕಡಲೆಕಾಯಿ ಮಾರಾಟ, ರೈತರಿಂದ ನೇರ ಗ್ರಾಹಕರಿಗೆ ಮಾರಾಟ  ಮತ್ತು ವಿವಿಧ ಕರಕುಶಲ ವಸ್ತುಗಳು ಮಾರಾಟದ ವ್ಯವಸ್ಥೆ ಮಾಡಲಾಗಿದೆ.

ಮಲ್ಲೇಶ್ವರ ಕಡಲೆಕಾಯಿ ಪರಿಷೆಯು ಪ್ಲಾಸ್ಟಿಕ್ ಮುಕ್ತ ಪರಿಷೆಯಾಗಬೇಕೆಂಬ ಉದ್ದೇಶದಿಂದ ‘ಮನೆಯಿಂದ ಕೈಚೀಲ ತನ್ನಿ’ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿದೆ.

ಮೂರು ದಿನಗಳ ಕಾಲ ಜರುಗುವ ಪರಿಷೆಯಲ್ಲಿ 8 ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ಪರಿಷೆಗೆ ಆಗಮಿಸುವ ಭಕ್ತರಿಗೆ ಕಡಲೆಕಾಯಿಯನ್ನು ಪ್ರಸಾದವಾಗಿ ನೀಡಲಾಗುತ್ತಿದೆ. ಮೂಲ ಸೌಕರ್ಯಗಳಾದ ನೀರಿನ ವ್ಯವಸ್ಥೆ ಶೌಚಾಲಯ ವ್ಯವಸ್ಥೆ ಮಾಡಲಾಗಿದೆ.

ಕಾಡು ಮಲ್ಲೇಶ್ವರ ಗೆಳೆಯರ ಬಳಗದ ಅಧ್ಯಕ್ಷ ಬಿ.ಕೆ.ಶಿವರಾಂ ಮಾತನಾಡಿ ಕಡಲೆಕಾಯಿ ಪರಿಷೆಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂದ್ರ ರಾಜ್ಯಗಳಿಂದ 350 ಮಳಿಗೆಗಳನ್ನು ರೈತರು ಹಾಕಿದ್ದಾರೆ.

ಈ ಬಾರಿ ಪರಿಷೆಯಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ತುಮಕೂರು, ಕನಕಪುರ ಜಿಲ್ಲೆಯ ರೈತರು ಸೇರಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ರೈತರು ಪಾಲ್ಗೊಂಡಿದ್ದು, 300 ಮಳಿಗೆಗಳನ್ನು ಉಚಿತವಾಗಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

2023ನೇ ಸಾಲಿನ ಕಾಡು ಮಲ್ಲೇಶ್ವರ ಸ್ವಾಮಿ ಕಡಲೆಕಾಯಿ ಪರಿಷೆಗೆ ಶಾಸಕ ಮುನಿರತ್ನ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಮಹೇಶ್ ಜೋಶಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಅನೂಪ್ ಅಯ್ಯಂಗಾರ್ ಜಂಟಿಯಾಗಿ ಉದ್ಘಾಟನೆ ಮಾಡಿದರು. 

click me!