ಇದು ನಮ್ಮ ಮೆಟ್ರೋ ತಾಕತ್ತು: 43 ಕಿ.ಮೀ ಪ್ರಯಾಣಕ್ಕೆ ಕೇವಲ 66 ರೂ.!

First Published | Oct 9, 2023, 7:12 PM IST

ಬೆಂಗಳೂರು (ಅ.09): ನೇರಳೆ ಮಾರ್ಗದ ವಿಸ್ತರಿತ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ. ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ 2.10 ಕಿ.ಮೀ. ಹಾಗೂ ಕೆಂಗೇರಿ-ಚಲ್ಲಘಟ್ಟದ ನಡುವೆ 2.05 ಕಿ.ಮೀ. ಮಾರ್ಗದಲ್ಲಿ ರೈಲುಗಳ ಸಂಚಾರ ಶುರುವಾಗಿದೆ.

ಯಾವುದೇ ರೀತಿಯ ಅಧಿಕೃತ ಉದ್ಘಾಟನೆ ಕಾರ್ಯಕ್ರಮ ಮಾಡದೇ, ನೇರಳೆ ಮಾರ್ಗದ ವಿಸ್ತರಿತ ಭಾಗ ಕೆಂಗೇರಿಯಿಂದ-ಚಲ್ಲಘಟ್ಟ ಹಾಗೂ ಬೈಯ್ಯಪ್ಪನಹಳ್ಳಿ-ಕೆ.ಆರ್‌.ಪುರ ಮಾರ್ಗ ಸೋಮವಾರದಿಂದ (ಅ.9) ಪೂರ್ಣ ಪ್ರಮಾಣದಲ್ಲಿ ಜನಸಂಚಾರಕ್ಕೆ ಮುಕ್ತವಾಗಿದೆ.

ದೇಶದಲ್ಲಿ ಎರಡನೇ ಅತೀ ಉದ್ದದ ಮೆಟ್ರೋ ಮಾರ್ಗ ಎನ್ನಿಸಿಕೊಂಡಿರುವ ‘ನಮ್ಮ ಮೆಟ್ರೋ’ ಇದೀಗ ವಿಸ್ತರಣೆ ಮಾರ್ಗ ಸೇರ್ಪಡೆಯಿಂದ ಒಟ್ಟಾರೆ 73.81 ಕಿಲೋ ಮೀಟರ್‌ಗೆ ಹಿಗ್ಗಿದೆ.

Latest Videos



ಯಾವುದೇ ಔಪಚಾರಿಕ ಉದ್ಘಾಟನೆ ಇಲ್ಲದೆ 2.10 ಕಿ.ಮೀ. ಉದ್ದದ ಬೈಯಪ್ಪನಹಳ್ಳಿ-ಕೆಆರ್ ಪುರ ಮತ್ತು 2.5 ಕಿ.ಮೀ. ಉದ್ದದ ಕೆಂಗೇರಿ-ಚಲ್ಲಘಟ್ಟ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾಗಿದೆ.

ಮೈಸೂರು ರಸ್ತೆಯಿಂದ ಚಲ್ಲಘಟ್ಟ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಇದರಿಂದ ಸಂಪೂರ್ಣ ನೇರಳೆ ಮಾರ್ಗ ವೈಟ್‌ಫೀಲ್ಡ್‌ (ಪೂರ್ವ) -ಚಲ್ಲಘಟ್ಟ (ಪಶ್ಚಿಮ) ಭಾಗ 43.49 ಕಿ.ಮೀ.ಗೆ ಹಿಗ್ಗಿದ್ದು, ವಿಶೇಷವಾಗಿ ಐಟಿ ಉದ್ಯೋಗಿಗಳು ಹಾಗೂ ಜನತೆ ಹೆಚ್ಚಿನ ಅನುಕೂಲವಾಗಲಿದೆ. 

ಸದ್ಯ ಪ್ರತಿದಿನ ನೇರಳೆ, ಹಸಿರು ಮಾರ್ಗದಲ್ಲಿ ಸರಿಸುಮಾರು 6.50 ಲಕ್ಷ ಜನ ಪ್ರಯಾಣಿಸುತ್ತಿದ್ದು, ಇವೆರಡು ಮಾರ್ಗ ಸೇರ್ಪಡೆಯಿಂದ 7.50 ಲಕ್ಷ ಜನ ಸಂಚರಿಸುವ ನಿರೀಕ್ಷೆಯಿದೆ.

ದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಂ.ಜಿ.ರಸ್ತೆ ಮಾರ್ಗದಲ್ಲಿ ಪ್ರತಿ 3 ನಿಮಿಷಕ್ಕೆ ಒಂದು ರೈಲು ಸಂಚಾರ ಆಗಲಿದೆ. 

ಪೀಕ್‌ ಅವರ್‌ನಲ್ಲಿ 3 ನಿಮಿಷಕ್ಕೊಂದು ರೈಲು: ವೈಟ್‌ಫೀಲ್ಡ್‌ನಿಂದ ನೇರವಾಗಿ ಚಲ್ಲಘಟ್ಟದವರೆಗೆ ಯಾವುದೇ ತಡೆಯಿಲ್ಲದೆ ಪ್ರಯಾಣಿಕರು ಸಂಚರಿಸಬಹುದಾಗಿದೆ. ಸಂಚಾರ ದಟ್ಟಣೆ ಇಲ್ಲದ ವೇಳೆಯೂ ವೈಟ್‌ಫೀಲ್ಡ್‌ನಿಂದ ಪಟ್ಟಂದೂರು ಅಗ್ರಹಾರ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. 

ಕೊನೆಯ ರೈಲು ವೈಟ್‌ಫೀಲ್ಡ್‌ನಿಂದ (ಕಾಡುಗೋಡಿ) ರಾತ್ರಿ 10.45ಕ್ಕೆ ಹಾಗೂ ಉಳಿದ ಟರ್ಮಿನಲ್‌ ನಿಲ್ದಾಣಗಳಿಂದ ರಾತ್ರಿ 11.05ಕ್ಕೆ ಹೊರಡುತ್ತದೆ. ಎಲ್ಲ ಟರ್ಮಿನಲ್ ನಿಲ್ದಾಣಗಳಿಂದ ರೈಲು ಸೇವೆ ಎಂದಿನಂತೆ ಬೆಳಗ್ಗೆ 5ಕ್ಕೆ ಆರಂಭವಾಗುತ್ತದೆ.

ಮೈಸೂರು ರಸ್ತೆಯಿಂದ ಚಲ್ಲಘಟ್ಟ ಮಾರ್ಗದಲ್ಲಿ ಪ್ರತಿ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

click me!