Bengaluru: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವೈದ್ಯಕೀಯ ವಿದ್ಯಾರ್ಥಿನಿ ಸಾವು; ಗೆಳತಿ ಗಂಭೀರ

Published : Mar 12, 2026, 10:56 AM IST

ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಬಳಿ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು 21 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಕೂಟಿಯಲ್ಲಿ ಗೆಳತಿಯೊಂದಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮತ್ತೊಬ್ಬ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

PREV
15
ವೈದ್ಯಕೀಯ ವಿದ್ಯಾರ್ಥಿನಿ ಸಾವು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. 21 ವರ್ಷದ ಕೃತಿಕಾ ಮೃತ ವಿದ್ಯಾರ್ಥಿನಿ. ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗ ಬುಧವಾರ ಸಂಜೆ ಸುಮಾರು 4 ಗಂಟೆಗೆ ಅಪಘಾತ ಸಂಭವಿಸಿದೆ.

25
ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ

ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನಲ್ಲಿ ಕೃತಿಕಾ 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದರು. ಗೆಳತಿ ಹಂಸಾ ಜೊತೆ ಕೃತಿಕಾ ಸ್ಕೂಟಿಯಲ್ಲಿ ತೆರಳುತ್ತಿದ್ದರು. ಚಲಿಸುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸ್ಕಿಡ್ ಆಗಿ, ಇಬ್ಬರು ಕೆಳಗೆ ಬಿದ್ದಿದ್ದಾರೆ.

35
ಕೃತಿಕಾ ಮೇಲೆ ಹರಿದ ಲಾರಿ

ಸ್ಕೂಟಿ ಚಲಾಯಿಸುತ್ತಿದ್ದ ಹಂಸಾ ಎಡಭಾಗಕ್ಕೆ ಬಿದ್ರೆ, ಕೃತಿಕಾ ಬಲಭಾಗಕ್ಕೆ ಬಿದ್ದಿದ್ದಾಳೆ. ಈ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಕೃತಿಕಾ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮೃತರಾಗಿದ್ದಾರೆ.

45
ಹಂಸಾಗೆ ಗಂಭೀರ ಗಾಯ

ಹಂಸಾ ಗಂಭೀರವಾಗಿ ಗಾಯಗೊಂಡಿದ್ದು, ರಾಜರಾಜೇಶ್ವರಿ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರವಾನಿಸಲಾಗಿದೆ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

55
ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಹೇಳಿಕೆ

ಮೈಸೂರು ರಸ್ತೆಯಲ್ಲಿರುವ ಆರ್.ಆರ್ ಆಸ್ಪತ್ರೆ ಎಕ್ಸಿಟ್ ಗೇಟ್ ನಲ್ಲಿ ಅಪಘಾತ ನಡೆದಿದೆ. ಇಬ್ಬರು ಮೆಡಿಕಲ್ ವಿದ್ಯಾರ್ಥಿನಿ ಬೈಕ್ ನಲ್ಲಿ ತೆರಳುತ್ತಿದ್ದರು. ಬೆಂಗಳೂರಿಂದ ಮೈಸೂರು ಕಡೆಗೆ ಹೋಗ್ತಿದ್ದ ಲಾರಿ ಡಿಕ್ಕಿ ಆಗಿದೆ. ಹಿಂಬದಿ ಸವಾರಿಣಿ ಸಾವನ್ನಪ್ಪಿದ್ದಾರೆ, ಚಾಲಕಿಗೆ ಗಾಯವಾಗಿದೆ. ಮೃತಳು ಆರ್.ಆರ್.ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನೂಪ್ ಶೆಟ್ಟಿ ಹೇಳಿದ್ದಾರೆ.

Read more Photos on
click me!

Recommended Stories