Bengaluru Traffic: ಇಂದು ಬೆಂಗಳೂರಿನ ಈ ರಸ್ತೆಗಳತ್ತ ಹೋಗದಿರಿ! ಪರ್ಯಾಯ ಮಾರ್ಗದ ಮಾಹಿತಿ

Published : Mar 12, 2026, 07:37 AM IST

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಿಂದಾಗಿ, ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಶೇಷಾದ್ರಿ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪೊಲೀಸರು ಸಾರ್ವಜನಿಕರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

PREV
15
ಬೃಹತ್ ಪ್ರತಿಭಟನೆ

ಬೃಹತ್ ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದ ಶೇಷಾದ್ರಿ ರಸ್ತೆಯ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್‌) ವ್ಯಾಪ್ತಿಯಲ್ಲಿ ಗುರುವಾರ ಸಂಚಾರ ವ್ಯವಸ್ಥೆ ಬದಲಾವಣೆಗೆ ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

25
ತಾತ್ಕಾಲಿಕ ಸಂಚಾರ ನಿರ್ಬಂಧ

ಶಾಂತಲಾ ಜಂಕ್ಷನ್ ಮತ್ತು ಖೋಡ್ಸೆ ಸರ್ಕಲ್‌ನಿಂದ ಆನಂದರಾವ್ ಮೇಲ್ಸೇತುವೆ, ಹಳೇ ಜೆಡಿಎಸ್ ಕಚೇರಿ ಕ್ರಾಸ್ ಮತ್ತು ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್‌ವರೆಗೆ.

35
ಪರ್ಯಾಯ ಮಾರ್ಗಗಳು

ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರ, ನೆಹರು ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆಯಿಂದ ಸಾಗುವುದು.

45
ಪರ್ಯಾಯ ಮಾರ್ಗಗಳು

ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಸಾಗುವ ವಾಹನಗಳು ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್ಎಂ. ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್ ರಸ್ತೆ ಮೂಲಕ ಸಂಚರಿಸುವುದು.

ಇದನ್ನೂ ಓದಿ: ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳು ಬಂದ್‌

55
ಪರ್ಯಾಯ ಮಾರ್ಗಗಳು

ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಸಾಗುವ ವಾಹನಗಳು ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ನಿಂದ ತೆರಳುವುದು.

ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಾಗುವ ವಾಹನಗಳು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆ ತೆರಳಬೇಕು.

ಸುಬ್ಬಣ್ಣ ಜಂಕ್ಷನ್ ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್.

ಇದನ್ನೂ ಓದಿ: ಪಿ.ಜಿಗಳಲ್ಲಿ ದಿನಕ್ಕೆ ಎರಡು ಹೊತ್ತು ಮಾತ್ರ ಊಟ : ದೋಸೆ, ಪೂರಿ, ಚಪಾತಿಗೆ ಬ್ರೇಕ್

Read more Photos on
click me!

Recommended Stories