ನೀಟ್ ಪರೀಕ್ಷೆಗೆ ತಡವಾಗಿ ಬೆಂಗಳೂರು ಟ್ರಾಫಿಕ್ ಕಾರಣ ಎಂದು ರಾಜಕೀಯ ನಾಯಕರು ಆರೋಪಿಸಿದ್ದರು. ಆದರೆ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಸಂಚಾರಿ ಪೊಲೀಸರು, ವಿದ್ಯಾರ್ಥಿಗಳು ಮನೆಯಿಂದ ತಡವಾಗಿ ಹೊರಟಿದ್ದು ಮತ್ತು ತಪ್ಪು ಮಾರ್ಗವನ್ನು ಆಯ್ಕೆ ಮಾಡಿದ್ದೇ ವಿಳಂಬಕ್ಕೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
ಭಾನುವಾರ ನಡೆದ ನೀಟ್ ಪರೀಕ್ಷಾ ಕೇಂದ್ರ ತಲುಪಲು ವಿಳಂಬವಾದ ಹಿನ್ನೆಲೆ ಮೂವರು ವಿದ್ಯಾರ್ಥಿಗಳು ವಂಚಿತರಾಗಿದ್ದರು. ಮೂವರು ವಿದ್ಯಾರ್ಥಿಗಳು ಪರೀಕ್ಷೆಯಿಂದ ಹೊರಗುಳಿಯಲು ಬೆಂಗಳೂರು ಟ್ರಾಫಿಕ್ ಕಾರಣ ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಆರೋಪಿಸಿದ್ದರು.
25
ರಾಜಕೀಯ ನಾಯಕರ ವಾಕ್ಸಮರ
ಭಾನುವಾರ ಅರಮನೆ ಮೈದಾನದಲ್ಲಿ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಈ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರಿಂದ ಸಹಜವಾಗಿಯೇ ಹೆಬ್ಬಾಳ, ಮೇಕ್ರಿ ಸರ್ಕಲ್, ಗುಟ್ಟಹಳ್ಳಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಟ್ರಾಫಿಕ್‌ನಿಂದಲೇ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದರು.
35
ಆಯ್ಕೆ ಮಾಡಿಕೊಂಡ ಮಾರ್ಗ
ಇದೀಗ ಈ ಎಲ್ಲಾ ಆರೋಪಗಳಿಗೆ ಬೆಂಗಳೂರು ಸಂಚಾರಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷೆಯಿಂದ ಹೊರಗುಳಿಯಲು ಟ್ರಾಫಿಕ್ ಕಾರಣ ಅಲ್ಲ ಎಂದು ಹೇಳಿದ್ದಾರೆ. ಸಿಸಿಟಿವಿ ಪರಿಶೀಲನೆ ವೇಳೆ ಪರೀಕ್ಷೆಗೆ ಹೊರಡುವ ಸಮಯದಲ್ಲಿ ಟ್ರಾಫಿಕ್ ಸಾಮನ್ಯವಾಗಿತ್ತು. ಪೊಲೀಸ್ ಸಿಬ್ಬಂದಿ ಅಗತ್ಯವಿರುವ ಕಡೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಮನೆಯಿಂದ ತಡವಾಗಿ ಹೊರಟಿದ್ದು ಮತ್ತು ಪರೀಕ್ಷಾ ಕೇಂದ್ರಕ್ಕೆ ಹೊರಡಲು ಆಯ್ಕೆ ಮಾಡಿಕೊಂಡ ಮಾರ್ಗದಿಂದ ವಿಳಂಬವಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಿಸಿಟಿವಿ ದೃಶ್ಯಗಳ ಪ್ರಕಾರ, ಪರೀಕ್ಷೆಯಿಂದ ವಂಚಿತ ವಿದ್ಯಾರ್ಥಿ, 12:57 PMಕ್ಕೆ ಮನೆಯಿಂದ ಹೊರಟಿದ್ದಾರೆ. 1.30PMಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕಿತ್ತು. ಆದ್ರೆ ವಿದ್ಯಾರ್ಥಿ 1:33 PMಕ್ಕೆ ಪರೀಕ್ಷಾಕೇಂದ್ರ ತಲುಪಿದ್ದಾರೆ. ಆರ್‌ಟಿ ನಗರದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಶಾರ್ಟ್‌ಕಟ್ ಇದ್ರೂ, ವಿದ್ಯಾರ್ಥಿ ಲಾಂಗ್‌ರೂಟ್ ಆಯ್ಕೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
55
ವಿಳಂಬಕ್ಕೆ ಸಂಚಾರ ದಟ್ಟಣೆ ಕಾರಣ ಅಲ್ಲ
ಜೂನ್ 21ರಂದು ವಿದ್ಯಾರ್ಥಿಗಳು ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಲು ಸಂಚಾರ ದಟ್ಟಣೆ ಕಾರಣವಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಬೆಂಗಳೂರು ಸಂಚಾರಿ ಪೊಲೀಸರು ನ್ಯಾಯೋಚಿತ, ಪಾರದರ್ಶಕ ಮತ್ತು ಪುರಾವೆ ಆಧಾರಿತ ಮೌಲ್ಯಮಾಪನಗಳಿಗೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿಕೊಂಡಿದ್ದಾರೆ.