ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು
ಸದ್ಯ ಮೂರಿನಕಟ್ಟೆ ವಿವಾದಿತ ಸ್ಥಳದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದ್ದು, ಬಿಗುವಿನ ವಾತಾವರಣ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ದೀಪನ್ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮೂರಿನಕಟ್ಟೆ ಸುತ್ತಮುತ್ತ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ (DAR) ತುಕಡಿಗಳನ್ನು ನಿಯೋಜಿಸಲಾಗಿದ್ದು, ಇಡೀ ಭಟ್ಕಳ ಪಟ್ಟಣ ಪೊಲೀಸರ ಸರ್ಪಗಾವಲಿನಲ್ಲಿ ನಿಂತಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಭಟ್ಕಳದಲ್ಲೇ ಮೊಕ್ಕಾಂ ಹೂಡಿದ್ದು, ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.