ಅಭಿಮಾನ ಅತಿರೇಕಕ್ಕೆ ಹೋಗಿ ಜೀವ ಕಳೆದುಕೊಂಡು, ತಮ್ಮನ್ನೇ ನಂಬಿರುವ ಕುಟುಂಬದವರಿಗೆ ಶಾಶ್ವತ ಶೋಕ ನೀಡಿರುವ ದುರ್ಘಟನೆ ವೈಯಕ್ತಿಕವಾಗಿ ನನಗೆ ಅತ್ಯಂತ ನೋವನ್ನು ತಂದಿದೆ. ಇಂದು ಗುಂಡ್ಲುಪೇಟೆಯ ಬೊಮ್ಮಲಾಪುರದಲ್ಲಿ, ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರ ಮನೆಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.