ಏಪ್ರಿಲ್ 20ರ ಒಳಗಾಗಿ ಸಿದ್ದತೆ ಪೂರ್ಣಗೊಳಿಸಲು ಸೂಚನೆ:
ಇತ್ತೀಚಿಗೆ ಹೆಸರಘಟ್ಟ ಕೆರೆಗೆ ಹಾಗೂ ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ಗೆ ಭೇಟಿ ನೀಡಿದ್ದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ ವಿ ರಾಮ್ ಪ್ರಸಾತ್ ಮನೋಹರ್, 125 ವರ್ಷಗಳ ಹಿಂದಿನ ತಾಂತ್ರಿಕತೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದರು. ಈ ಪಂಪಿಂಗ್ ಸ್ಟೇಷನ್ ನಲ್ಲಿರುವಂತಹ ಅನುಕೂಲತೆಗಳ ಬಗ್ಗೆ ಹಾಗೂ ನೀರು ಸರಬರಾಜಿಗೆ ಇಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದ ಅವರು, ಏಪ್ರಿಲ್ 20ರ ಒಳಗಾಗಿ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.