ಬೆಂಗಳೂರು (ಜೂ. 17): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಸರ್ಪ್ರೈಸ್ ದಾಳಿ ನಡೆಸಿ ಗಾಂಜಾ, ಬ್ಲೇಡ್, ಚಾಕು, ನಗದು ಹಣ ಸೇರಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣ ರಾಜ್ಯದ ಪೊಲೀಸ್ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ನಿನ್ನೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಸಿಸಿಬಿ ತಂಡ ಜೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಕೈದಿಗಳ ಬಳಿಯಿಂದ ಅನೇಕ ಅಸಾಧಾರಣ ವಸ್ತುಗಳನ್ನು ವಶಪಡಿಸಿಕೊಂಡಿದೆ.