ತುಮಕೂರು: ಸಿದ್ಧಗಂಗಾ ಮಠದ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬೊಮ್ಮಾಯಿ

First Published | Aug 7, 2021, 11:25 AM IST

ತುಮಕೂರು(ಆ.07): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಸಿದ್ಧಗಂಗಾ ಮಠಕ್ಕೆ ವಾರ ಭೇಟಿ ನೀಡಿ, ಲಿಂ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದಿದ್ದಾರೆ.  
 

ನಾನು ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಮಠಕ್ಕೆ ಭೇಟಿ ನೀಡಿದ್ದೇನೆ. ನಾಡಿನ ಸೇವೆ ಮಾಡುವುದಕ್ಕೆ ಪರಮ ಪೂಜ್ಯ ಹಿರಿಯ ಲಿಂ. ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡಿದ್ದೇನೆ ಎಂದು ತಿಳಿಸಿದ ಸಿಎಂ ಬೊಮ್ಮಾಯಿ

ತುಮಕೂರು ಸಿದ್ಧಗಂಗಾ ಮಠ ಜ್ಞಾನ, ಅನ್ನದಾನಕ್ಕೆ ಪ್ರಸಿದ್ಧಿ ಪಡೆದುಕೊಂಡಿದೆ. ಈ ಮಠಕ್ಕೆ ಬಂದಾಗ ಪ್ರೇರಣೆ ಪಡೆದುಕೊಂಡಿದ್ದೇನೆ ಎಂದ ಬೊಮ್ಮಾಯಿ 

Tap to resize

ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನಿಸಿದ ಶ್ರೀಗಳು

ಈ ವೇಳೆ ಸಚಿವರಾದ ಜೆ.ಸಿ.‌ಮಾಧುಸ್ವಾಮಿ, ಬಿ.ಸಿ. ನಾಗೇಶ್, ಮುರುಗೇಶ್ ನಿರಾಣಿ,  ವಿ.ಸೋಮಣ್ಣ,  ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಡಾ. ರಾಜೇಶ್ ಗೌಡ, ಸಂಸದ ಜಿ.ಎಸ್. ಬಸವರಾಜು, ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಬಿ. ಸುರೇಶ್ ಗೌಡ,  ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರವಾಡ್, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಸೇರಿದಂತೆ ಇತರರಿದ್ದರು.

Latest Videos

click me!