Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಬಿಗ್ ಅಪ್‌ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್

Published : Aug 20, 2026, 10:37 AM IST

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮರುಪರಿಶೀಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಪ್ರಕ್ರಿಯೆಗಾಗಿ ಬಯೋಮೆಟ್ರಿಕ್/ಫೇಸ್ ಅಥೆಂಟಿಕೇಶನ್ ಬಳಸಲಾಗುವುದು ಎಂದು ಹೇಳಿದ್ದಾರೆ.

PREV
16
ಗೃಹಲಕ್ಷ್ಮೀ ಯೋಜನೆ: ಫಲಾನುಭವಿಗಳ ಪಟ್ಟಿ ಪರಿಷ್ಕರಣೆ!

ಬೆಂಗಳೂರು: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಅವರು ಸರ್ಕಾರ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಿಗ್ ಆಪ್‌ಡೇಟ್ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಎಂಎಲ್‌ಸಿ ದಿನೇಶ್ ಗೂಳಿಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಮರುಪರಿಶೀಲನೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

26
ಸಿಎಂ ಡಿಕೆ ಶಿವಕುಮಾರ್ ಹೇಳಿದ್ದನು?

ವಿಧಾನಪರಿಷತ್‌ನಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಅರ್ಜಿ ಮರುಪರಿಶೀಲನೆಗಾಗಿ ಸೇವಾ ಸಿಂಧು ಕೇಂದ್ರಗಳು ಹಾಗು ಮನೆಮನೆ ಸಮೀಕ್ಷೆ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

36
ಫಲಾನುಭವಿಗಳ ಬಯೋಮೆಟ್ರೀಕ್/ಫೇಸ್ ಅಥೆಂಟಿಕೇಶನ್

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಎಂಎಲ್‌ಸಿ ದಿನೇಶ್‌ ಗೂಳಿಗೌಡ ಅವರು ಗೃಹಲಕ್ಷ್ಮಿ ಯೋಜನೆಯ ಕುರಿಂತೆ ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಮರುಪರಶೀಲನೆ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ಬಯೋಮೆಟ್ರೀಕ್/ಫೇಸ್ ಅಥೆಂಟಿಕೇಶನ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದೇ ಉದ್ದೇಶಕ್ಕಾಗಿ ಇಡಿಸಿಎಸ್ ಮೂಲಕ ಮೊಬೈಲ್ ಮತ್ತು ವೆಬ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ. ಇದರ ಪರಿಶೀಲನೆ ಅಂತಿಮ ಹಂತದಲ್ಲಿದೆ ಎಂದು ವಿವರಿಸಿದ್ದಾರೆ.

46
ಗೃಹಲಕ್ಷ್ಮಿ ಯೋಜನೆಗೆ 76,951 ಕೋಟಿ ರೂಪಾಯಿ ಖರ್ಚು

ಯೋಜನೆಗಾಗಿ ರಾಜ್ಯ ಸರ್ಕಾರ ಈವರೆಗೂ 76,951 ಕೋಟಿ ರೂಪಾಯಿ ಪಾವತಿ ಮಾಡಲಾಗಿದೆ. ಒಟ್ಟು 1,24,48,938 ಫಲಾನುಭವಿಗಳಿದ್ದು, 32 ಕಂತುಗಳಲ್ಲಿ ತಲಾ 2000 ರೂಪಾಯಿಗಳನ್ನು ನೇರವಾಗಿ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

56
ಹೊಸ ಅರ್ಜಿ ಸಲ್ಲಿಕೆ ಯಾವಾಗ?

ಉಳಿದಂತೆ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಾಗಿ ಅರ್ಜಿ ಸಲ್ಲಿಕೆಯನ್ನು ಸರ್ಕಾರ ಕಡ್ಡಾಯ ಮಾಡಿದ್ದು, ಶೀಘ್ರದಲ್ಲಿಯೇ ಹೊಸದಾಗಿ ಅರ್ಜಿ ಸಲ್ಲಿಕೆ ಸಂಬಂಧ ಹೊಸ ಅರ್ಹತಾ ಮಾನದಂಡಗಳನ್ನು ನೀಡಲಿದೆ. ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿದ್ಧತೆ ನಡೆಸಿಕೊಳ್ಳುತ್ತಿದ್ದು, ಆನ್ ಲೈನ್ ಸೇರಿದಂತೆ ಆಫ್ ಲೈನ್ ನಲ್ಲಿಯೂ ಅರ್ಜಿ ಸಲ್ಲಿಕೆಗೆ ಸರ್ಕಾರ ಅವಕಾಶ ನೀಡುವ ಸಾಧ್ಯತೆ ಇದೆ.

66
ಕಲಬುರಗಿಯಲ್ಲಿ ಮೃತರ ಖಾತೆಗೆ ಜಮೆ ಆಗಿದ್ದ ಹಣ ವಾಪಸ್

ಇನ್ನು, ಕಲಬುರಗಿಯಲ್ಲಿ ಮೃತ ಫಲಾನುಭವಿಗಳ ಖಾತೆಗೆ ಜಮೆ ಆಗಿದ್ದ 9,156 ಪ್ರಕರಣಗಳಲ್ಲಿ ಸರ್ಕಾರ 2.14 ಕೋಟಿ ರೂಪಾಯಿ ಹಣವನ್ನು ವಾಪಸ್ ಪಡೆದುಕೊಂಡಿದೆ. ಮೃತರ ಖಾತೆಗೆ ಜಮೆ ಆಗಿರುವ 2.12 ಕೋಟಿ ಹಣವನ್ನು ವಾಪಸ್ ವಸೂಲಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಪಿಟಿ ಪರಮೇಶ್ವರ ನಾಯಕ್ ತಿಳಿಸಿದ್ದಾರೆ.

Read more Photos on
click me!

Recommended Stories