ನಗರದ ಹೊರವಲಯದಲ್ಲಿರುವ ಬುರಣಾಪೂರ-ಮದಬಾವಿ ಮಧ್ಯ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣ ಸ್ಥಳಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಕಳೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ವಿಮಾನ ನಿಲ್ದಾಣಕ್ಕಾಗಿ 220 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿದ್ದಾರೆ. ಪ್ರಥಮ ಹಂತವಾಗಿ 95 ಕೋಟಿ ಕಾಯ್ದಿರಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಧಿ ನೀಡಲಾಗಿದೆ ಎಂದರು.
undefined
ಈ ಕಾಮಗಾರಿ ಪಾರದರ್ಶಕ ರೀತಿಯಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಕಾನೂನಿನ ರೀತ್ಯ ಟೆಂಡರ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ವಿಮಾನ ನಿಲ್ದಾಣದ ಯಂತ್ರೋಪಕರಣ ಸೌಲಭ್ಯಕ್ಕೆ ಒಪ್ಪಿಗೆ ನೀಡಲಾಗಿದ್ದು, ರಾಜ್ಯ ಸರ್ಕಾರ ವಿಮಾನ ನಿಲ್ದಾಣ ನಿರ್ಮಿಸುವ ಜವಾಬ್ದಾರಿ ಹೊಂದಿದೆ. ಮುಂದಿನ ಒಂದು ವರ್ಷದ ಅವಧಿಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳಿಸುವ ಉದ್ದೇಶ ಹೊಂದಿದ್ದು, ಎರಡನೇ ಹಂತದಲ್ಲಿ ಉಳಿದ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
undefined
ಈ ವಿಮಾನ ನಿಲ್ದಾಣದಲ್ಲಿ ಎಟಿಆರ್-72 ಸಣ್ಣ ವಿಮಾನಗಳಿಗೆ ಸುಮಾರು 82 ಸೀಟು ಹೊಂದಿರುವ ವಿಮಾನಗಳಿಗೆ ಅವಕಾಶ ದೊರೆಯಲಿದ್ದು, ಈ ಭಾಗದ ಜನತೆಯ ಬಹುವರ್ಷಗಳ ಬೇಡಿಕೆ ರಾಜ್ಯ ಸರ್ಕಾರ ಈಡೇರಿಸಿದೆ. ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲೂ ಈ ನಿಲ್ದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ನಂತರ ಇದು ಸಾಧ್ಯವಾಗದೆ ವಿವಿಧ ಕಾರಣಗಳಿಂದ ಯೋಜನೆ ಸ್ಥಗಿತಗೊಂಡಿತ್ತು. ಈಗ ಮುಖ್ಯಮಂತ್ರಿಗಳ ಮುತುವರ್ಜಿಯಿಂದ ಜಿಲ್ಲೆಗೆ ವಿಮಾನ ನಿಲ್ದಾಣ ನಿರ್ಮಾಣದ ಕನಸು ಸಾಕಾರಗೊಂಡಿದೆ. ಜಿಲ್ಲೆಯಲ್ಲಿ ಕೆರೆ ತುಂಬುವ ಯೋಜನೆಗೂ ನಮ್ಮ ಸರ್ಕಾರ ಚಾಲನೆ ನೀಡಿತ್ತು. ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳು ಮತ್ತು ಅಂದಿನ ನೀರಾವರಿ ಸಚಿವರನ್ನು ಅಭಿನಂದಿಸುತ್ತೇನೆ ಎಂದರು.
undefined
ವಿಮಾನ ನಿಲ್ದಾಣದ ಪ್ರಸ್ತಾವಿತ ರನ್‌ವೇ ಸ್ಥಳ, ಕಟ್ಟಡ ನಿರ್ಮಾಣಕ್ಕಾಗಿ ಕಾಯ್ದಿರಿಸಿದ ಸ್ಥಳ, ಪಾರ್ಕಿಂಗ್ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಅವಶ್ಯಕ ಮಾಹಿತಿಯನ್ನು ಅಧಿಕಾರಿಗಳಿಂದ ಡಿಸಿಎಂ ಪಡೆದರು.
undefined
ವಿಜಯಪುರ ಜಿಲ್ಲೆ ವಿಮಾನ ನಿಲ್ದಾಣಕ್ಕಾಗಿ ಅತ್ಯಂತ ಅನುಕೂಲಕರ ವಾತಾವರಣ ಹಾಗೂ ಸೌಲಭ್ಯ ಹೊಂದಿದೆ. ಐತಿಹಾಸಿಕ ಸ್ಥಳಗಳು ಇರುವುದರಿಂದ ವಿದೇಶದಿಂದ ಹೆಚ್ಚಿನ ಪ್ರವಾಸಿಗರು, ಸ್ಮಾರಕಗಳ ಅಧ್ಯಯನಕ್ಕೆ ಬರಲಿದ್ದು, ಹೆಚ್ಚು ಕೈಗಾರಿಕೆಗಳು ಸ್ಥಾಪನೆಗೂ ನೆರವಾಗಲಿದೆ. ನೀರು, ವಿದ್ಯುತ್ ಮತ್ತು ಜಮೀನುಗಳ ಸಮರ್ಪಕ ಸೌಲಭ್ಯವನ್ನು ಜಿಲ್ಲೆ ಹೊಂದಿದೆ. ವಿಮಾನ ನಿಲ್ದಾಣದಿಂದ ಹೆಚ್ಚು ಲಾಭದಾಯಕ ಆಗಲಿದೆ. ಜತೆಗೆ ವಿಮಾನ ನಿಲ್ದಾಣ ನಿರ್ಮಾಣದಿಂದ ಪ್ರವಾಸೋದ್ಯಮ, ಕೈಗಾರಿಕಾಭಿವೃದ್ಧಿ, ಆರ್ಥಿಕ ಚಟುವಟಿಕೆಗಳಿಗೂ ಸಹಕಾರಿಯಾಗಲಿದ್ದು, ಅಭಿವೃದ್ಧಿಗೆ ಇದು ರಾಜ್ಯ ಸರ್ಕಾರದ ಕಾಣಿಕೆಯಾಗಲಿದೆ ಎಂದರು.
undefined