ಧರ್ಮಸ್ಥಳ ಗುಂಪು ಘರ್ಷಣೆ; 6 ಜನರ ಬಂಧನ, ಬಂಧಿತರ ಹೆಸರು ಏನು?

Published : Aug 10, 2025, 09:03 AM IST

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಮತ್ತು ನಂತರದ ಗಲಭೆಯ ನಂತರ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಉಳಿದ 27 ಜನರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

PREV
15

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪು ಗಲಾಟೆ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ ಧರ್ಮಸ್ಥಳದ ಪಾಂಗಳ ಕ್ರಾಸ್ ಗಂಪು ಘರ್ಷಣೆ ಉಂಟಾಗಿತ್ತು. ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದರು.

25

ಈ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು 6 ಜನರನ್ನು ಬಂಧಿಸಿದ್ದು, ಇನ್ನುಳಿದ 27 ಜನರಿಗಾಗಿ ಹುಡುಕಾಟ ನಡೆಸಿದ್ದಾರೆ. ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತರಾಗಿದ್ದಾರೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನ್ನುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

35

ಅನಾಮಿಕ ತೋರಿಸಿದ ಸ್ಥಳದಲ್ಲಿ ಎಸ್‌ಐಟಿ ಶೋಧಕಾರ್ಯ ನಡೆಸುತ್ತಿದೆ. ಈ ಹಿನ್ನೆಲೆ ಶೋಧಕಾರ್ಯ ನಡೆಯುತ್ತಿರುವ ಸ್ಥಳದಿಂದಲೇ ಮಾಧ್ಯಮಗಳು ನೇರ ವರದಿಯನ್ನು ಪ್ರಕಟಿಸುತ್ತಿವೆ. ಆದರೆ ಯೂಟ್ಯೂಬರ್ ವರದಿ, ನಡೆ ಕುರಿತು ಧರ್ಮಸ್ಥಳ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಪರಿಣಾಮ ನೂಕಾಟ, ತಳ್ಳಾಟ ನಡೆದು ಉದ್ವಿಘ್ನ ಪರಿಸ್ಥಿತಿ ಸೃಷ್ಟಿಯಾಗಿದ್ದರಿಂದ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದಿತ್ತು. ನಂತರ ಗಾಯಾಳು ಯೂಟ್ಯೂಬರ್‌ಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

45

ಧರ್ಮಸ್ಥಳದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಯುಟ್ಯೂಬರ್ ಗಳನ್ನು SDPI ಕಾರ್ಯಕರ್ತರು ಭೇಟಿ ಮಾಡಿದ್ದಾರೆ. ಧರ್ಮಸ್ಥಳ ಹೋರಾಟಗಾರರಿಗೂ SDPI ಏನು ಸಂಬಂಧ?ಏನಿದರಮರ್ಮ?ಈ ಹೋರಾಟದಲ್ಲಿರುವವರನ್ನು ಸೂಕ್ಷ್ಮವಾಗಿ ಗಮನಿಸಿ,ಎಡಪಂಥೀಯರು,ನಗರ ನಕ್ಸಲರು,SDPI,ಜಿಹಾದಿಗ್ಯಾಂಗ್,ಕಾನೂನು ಕೈಗೆತ್ತಿಕೊಳ್ಳುವವರೇ ತುಂಬಿದ್ದಾರೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ

55

ಎಸ್‌ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿಯನ್ನು ಬಳಸಿಕೊಳ್ತಿದೆ. ಎಸ್‌ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅನುಮಾನ ವ್ಯಕ್ತಪಡಿಸಿದ್ದಾರೆ.

Read more Photos on
click me!

Recommended Stories