ಭೀಕರ ಪ್ರವಾಹಕ್ಕೆ ರಾಯಚೂರು ತತ್ತರ: ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖಡಕ್‌ ಸಂದೇಶ

First Published | Oct 21, 2020, 11:41 AM IST

ರಾಯಚೂರು (ಅ.21): ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿದೆ. ಹೀಗಾಗಿ ಸಾಜಷ್ಟು ಸಂಖ್ಯೆಯಲ್ಲಿ ಜನರು ನಿರಾಶ್ರಿತರಾಗಿದ್ದಾರೆ. ನೆರೆ ಸಂತ್ರಸ್ತರಿಗಾಗಿಯೇ ಜಿಲ್ಲಾಡಳಿತ  ಕಾಳಜಿ ಕೇಂದ್ರಗಳನ್ನ ತೆರೆದಿದೆ. ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸ್ಥಾಪಿಸಲಾದ ಕಾಳಜಿ ಕೇಂದ್ರದಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಾಳಜಿ ಕೇಂದ್ರದಲ್ಲಿ ಶುಚಿತ್ವ ಕಾಪಾಡಬೇಕು, ಪೌಷ್ಟಿಕ ಆಹಾರ, ಶುದ್ಧ ಕುಡಿಯುವ ನೀರು, ವೈದ್ಯರು, ಔಷಧಿ ವ್ಯವಸ್ಥೆ, ಕಾಳಜಿ ಕೇಂದ್ರಗಳಲ್ಲಿ ಬ್ಲೀಚಿಂಗ್ ಪೌಡರ್ ಬಳಸಬೇಕು. ಮಕ್ಕಳಲ್ಲಿ ಅನಾರೋಗ್ಯ ಕಂಡುಬಂದರೆ ಕೂಡಲೇ ತಪಾಸಣೆಗೆ ಒಳಪಡಿಸಬೇಕು ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. 

ಇಂದು(ಬುಧವಾರ) ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ. ಆರ್. ವಿಶಾಲ್ ಅವರು, ರಾಯಚೂರು ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ. 32ರಷ್ಟು ಹೆಚ್ಚು ಮಳೆಯಾಗಿದೆ. ಮಳೆಯಿಂದಾಗಿ 64,120 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಆಗಿದೆ ಎಂದು ತಿಳಿಸಿದ್ದಾರೆ.
undefined
ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಭಾರೀ ಪ್ರವಾಹ ಉಂಟಾಗಿ ಸಾಕಷ್ಟು ಸಂಖ್ಯೆಯಲ್ಲಿ ಜನರು ನಿರ್ಗತಿಕರಾಗಿದ್ದಾರೆ. ಹೀಗಾಗಿ ನೆರೆ ಸಂತ್ರಸ್ತರಿಗೆಂದೇ ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದೆ.
undefined

Latest Videos


ರಾಯಚೂರು ಜಿಲ್ಲೆಯ 1650 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹಾನಿ ಉಂಡಾಗಿದೆ. ಮಳೆಯಿಂದಾಗಿ ಜಿಲ್ಲೆಯಾದ್ಯಂತ 472 ಮನೆಗಳಿಗೆ ಹಾನಿಯಾಗಿದೆ. ಭಾರೀ ಮಳೆಗೆ 165 ಕಿ.ಮೀ ಗ್ರಾಮೀಣ ರಸ್ತೆ ಹಾಗೂ 110 ಕಿ.ಮೀ. ನಗರದ ರಸ್ತೆಗಳಿಗೆ ಹಾನಿ, ಮಹಾಮಳೆಗೆ ಜಿಲ್ಲೆಯಾದ್ಯಂತ 21 ಸೇತುವೆಗಳು ಕುಸಿದಿವೆ. ಇಷ್ಟೆಲ್ಲಾ ಆದರೂ ಕೂಡ ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಕಲ ಸಜ್ಜುಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ತಿಳಿಸಿದ್ದಾರೆ.
undefined
ಪ್ರವಾಹದ ಆತಂಕದಲ್ಲಿರುವ ಗ್ರಾಮಗಳಲ್ಲಿ 24‍X 7 ಜಿಲ್ಲಾ ಹಾಗೂ ತಾಲೂಕಾ ಮಟ್ಟದ ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯನ್ನ ರಚಿಸಲಾಗಿದೆ.
undefined
click me!