ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪುತ್ರಿ ಅದ್ದೂರಿ ನಿಶ್ಚಿತಾರ್ಥ - ಕಾಫಿ ಡೇ ಮಾಲಿಕನೊಂದಿಗೆ ಎಂಗೇಜ್

First Published | Nov 19, 2020, 1:15 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ಅವರ ವಿವಾಹ ನಿಶ್ಚಿತಾರ್ಥ ಅದ್ದೂರಿಯಾಗಿ ನಡೆಯಿತು

ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರ ಅಳಿಯ, ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ದಾರ್ಥ ಹೆಗ್ಡೆ ಅವರ ಹಿರಿಯ ಪುತ್ರ ಅಮಾರ್ಥ್ಯ ಹೆಗ್ಡೆ ನಿಶ್ಚಿತಾರ್ಥ
ಬೆಂಗಳೂರಿನಲ್ಲಿ ನಡೆದ ವಿವಾಹ ನಿಶ್ಚಿತಾರ್ಥ ಸಮಾರಂಭ
Tap to resize

ಜೂನ್‌ 12ರಂದು ಸದಾಶಿವ ನಗರದಲ್ಲಿರುವ ಎಸ್‌.ಎಂ. ಕೃಷ್ಣ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಕುಟುಂಬದ ಸದಸ್ಯರು, ತಾಂಬೂಲ ಬದಲಾಯಿಸಿಕೊಂಡು ಅಮಾರ್ಥ್ಯ ಮತ್ತು ಐಶ್ವರ್ಯ ಅವರ ಮದುವೆ ನಿಶ್ಚಯ ಮಾಡಿದ್ದರು.
ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ 26 ವರ್ಷದ ಅಮಾರ್ಥ್ಯ ಅವರು ತಾಯಿ ಮಾಳವಿಕಾ ಅವರೊಂದಿಗೆ ಕಾಫಿ ಡೇ ಕಂಪನಿಯ ವ್ಯವಹಾರ ನಿರ್ವಹಿಸುತ್ತಿದ್ದಾರೆ. ಎಂಜಿನಿಯರಿಂಗ್‌ ಪದವೀಧರೆಯಾಗಿರುವ 22 ವರ್ಷದ ಐಶ್ವರ್ಯ ಅವರು ತಂದೆ ಡಿ.ಕೆ. ಶಿವಕುಮಾರ್‌ ಸ್ಥಾಪಿಸಿರುವ ಗ್ಲೋಬಲ್‌ ಅಕಾಡೆಮಿ ಆಫ್‌ ಟೆಕ್ನಾಲಜಿ ಸಂಸ್ಥೆಯನ್ನು ಮುನ್ನಡೆಸುವ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
2021ರ ಫೆಬ್ರವರಿಯಲ್ಲಿ ಇವರಿಬ್ಬರ ವಿವಾಹ ನಡೆಸಲು ಉಭಯ ಕುಟುಂಬಗಳು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.
DK Shivakumar
ನಿಶ್ಚಿತಾರ್ಥದಲ್ಲಿ ಮಿಂಚಿದ ಅಮರ್ಥ್ಯ - ಐಶ್ವರ್ಯ
ನಿಶ್ಚಿತಾರ್ಥದಲ್ಲಿ ಪಾಲ್ಗೊಂಡ ಸಿಎಂ ಬಿಎಸ್ ಯಡಿಯೂರಪ್ಪ
ಡಿಕೆಶಿ ಪುತ್ರಿ -ಸಿದ್ಧಾರ್ಥ್ ಹೆಗ್ಡೆ ಪುತ್ರ

Latest Videos

click me!