ಸಾರಿಗೆ ವ್ಯವಸ್ಥೆ ಉತ್ತಮವಾಗಿರುವ ದೇಶ ಅಥವಾ ರಾಜ್ಯ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರುತ್ತದೆ ಎಂಬ ಮಾತಿದ್ದು, ಕ್ಷೇತ್ರದಾದ್ಯಂತ ಗುಣಮಟ್ಟದ ರಸ್ತೆಗಳ ಅಭಿವೃದ್ಧಿಗೆ ತಮ್ಮ ಅವಧಿಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ತಾಲೂಕಿನ ಮಂಡಿಕಲ್ ಹೋಬಳಿಯಲ್ಲಿ ಹಲವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಭೂಮಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ತಾವು ಕ್ಷೇತ್ರದಲ್ಲಿ ಶಾಸಕರಾದ ನಂತರ ರ್ಸತೆಗಳ ಸ್ವರೂಪವನ್ನೇ ಬದಲಿಸಲಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನಾನಾ ಯೋಜನೆಗಳಡಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
ಚಿಂತಾಮಣಿಯಲ್ಲಿ ಕೈಗೊಳ್ಳಲಾಗಿದ್ದನಿಯಂತ್ರಣಾ ಹಾಗು ಮುನ್ನೆಚ್ಚರಿಕೆ ಕ್ರಮಗಳ ಪರಿವೀಕ್ಷಣೆ ನಡೆಸಿ, ಕಂಟೈನ್ಮೆಂಟ್ ಪ್ರದೇಶಕ್ಕೂ ಭೇಟಿ ನೀಡಿದ್ದಾರೆ.
ಚಿಂತಾಮಣಿ ತಾಲೂಕುಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದಾರೆ.
ಸಂಸದ ಮುನಿಸ್ವಾಮಿ,ಶಾಸಕ ಶ್ರೀ ಕೃಷ್ಣಾರೆಡ್ಡಿ, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.