ಬೆಂಗ್ಳೂರಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಪ್ರಯಾಣಕ್ಕೆ ಚಾಲನೆ: ಫ್ಲೈಟ್‌ ಏರಿದ ಎಂಬಿಪಾ, ಬಿಎಸ್‌ವೈ

First Published | Aug 31, 2023, 10:07 AM IST

ಬೆಂಗಳೂರು(ಆ.31): ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಪ್ರಯಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಎಂ.ಬಿ. ಪಾಟೀಲ್ ಇಂದು(ಗುರುವಾರ) ಚಾಲನೆ ನೀಡಿದ್ದಾರೆ.  

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಕ್ಕೆ ಚಾಲನೆ ನೀಡಿದ ಸಚಿವ ಎಂ.ಬಿ. ಪಾಟೀಲ್ ಹಾಗೂ ಮಾಜಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರಿಂದ ಶಿವಮೊಗ್ಗದತ್ತ ಮೊದಲ ವಿಮಾನ ಪ್ರಯಾಣ ಬೆಳೆಸಿದೆ. ಇಂಡಿಗೋ ವಿಮಾನ ಬೆಂಗಳೂರಿನಿಂದ ಶಿವಮೊಗ್ಗದತ್ತ ಪ್ರಯಾಣ ಆರಂಭಿಸಿದೆ.

Latest Videos


ಸಚಿವ ಎಂ. ಬಿ. ಪಾಟೀಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸೇರಿ ಹಲವರು ಪ್ರಯಾಣ ಮಾಡಿದ್ದಾರೆ. 

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣಗೊಂಡಿರುವ ರಾಜ್ಯದ 9ನೇ ವಿಮಾನ ನಿಲ್ದಾಣವಾಗಿದೆ. ಕೇಂದ್ರ ಸರ್ಕಾರದ ‘ಉಡಾನ್‌’ ಯೋಜನೆಯಡಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣದ ಉದ್ಘಾಟನೆಯನ್ನು ಕಳೆದ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಿದ್ದರು. 

ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆಯಲ್ಲಿ, 450 ಕೋಟಿ ರು.ಗಳ ವೆಚ್ಚದಲ್ಲಿ 779 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಏರ್‌ಬಸ್‌ ಮಾದರಿಯ ವಿಮಾನಗಳೂ ಇಲ್ಲಿ ಇಳಿಯಬಹುದು. 

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಂತರದ ಅತಿ ಉದ್ದನೆಯ ರನ್‌ವೇಯನ್ನು ಹೊಂದಿರುವ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಇದು ಒಳಗಾಗಿದೆ. 

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 4,320 ಚದರಡಿಯ ಟರ್ಮಿನಲ್‌ ನಿರ್ಮಿಸಲಾಗಿದ್ದು, ಒಟ್ಟಿಗೆ 200 ರಿಂದ 300 ಪ್ರಯಾಣಿಕರನ್ನು ನಿರ್ವಹಿಸಬಹುದಾಗಿದೆ

click me!