ಇಂದು(ಸೋಮವಾರ) ಜಿಲ್ಲೆಯ ಬಾದಾಮಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ, ಶಿರಾ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಇಂಟೆಲಿಜೆನ್ಸ್ ಮಾಹಿತಿ ವಿಚಾರದ ಬಗ್ಗೆ ಮಾತನಾಡಿದ ಅವರು, ಯಾವ ಇಂಟೆಲಿಜೆನ್ಸ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಯಾವ ಆಧಾರದ ಮೇಲೆ ಹೇಳ್ತಿದ್ದಾರೆ ನನಗೆ ಗೊತ್ತಿಲ್ಲ. ನಾನು ಕಣ್ಣಾರೆ ನೋಡಿರೋದು ಕಾಂಗ್ರೆಸ್ ಪರ ಜನರ ಒಲವು ಹೆಚ್ಚಿತ್ತು. ಪ್ರಧಾನಿ ಮೋದಿ ಅಲೆ ಎಲ್ಲಿದೆ, ಅಲೆನೂ ಇಲ್ಲ ಪಲೆನೂ ಇಲ್ಲ ಎಂದಿದ್ದಾರೆ.
ಇನ್ನು ಇದೇ ವೇಳೆ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ಸನ್ಮಾನಿಸಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.
ಬಿಡಿಸಿಸಿ ಬ್ಯಾಂಕ್‌ಗೆ ನೂತನ ನಿರ್ದೆಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಮುಖಂಡರೊಂದಿಗೆ ಸಿದ್ದರಾಮಯ್ಯರನ್ನ ಕಾಶಪ್ಪನವರ ಭೇಟಿ ಮಾಡಿದ್ದಾರೆ. ಈ ಮೂಲಕ ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನದತ್ತ ಕಾಶಪ್ಪನವರ ಲಾಭಿ ನಡೆಸುತ್ತಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಡಿಸಿಸಿ ಬ್ಯಾಂಕ್‌ಗಳಲ್ಲಿ ನಮ್ಮದೇನು ಇಲ್ಲ, ಅದನ್ನ ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರೆ. ಕಳೆದ ಬಾರಿ ಮಾತು ಕೊಟ್ಟಿದ್ದೀರಿ, ಈ ಬಾರಿ ಆ ಮಾತು ಈಡೇರಿಸಿ ಎಂದ ಕಾಶಪ್ಪನವರ ಬೆಂಬಲಿಗರು ಸಿದ್ದರಾಮಯ್ಯ ಅವರ ಬಳಿ ಕೇಳಿಕೊಂಡಿದ್ದಾರೆ.
ಬಿಡಿಸಿಸಿ ಬ್ಯಾಂಕ್‌ನ ಗದ್ದುಗೆ ಮೇಲೆ ಕಣ್ಣಿಟ್ಟ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ