'5092 ಕೋಟಿ ರೂಪಾಯಿ ರೈತರ ಸಾಲ ಮನ್ನಾ'

First Published | Nov 17, 2020, 2:29 PM IST

ಚಿಕ್ಕಬಳ್ಳಾಪುರದ ಹಾರೋಬಂಡೆ ಕ್ರಾಸ್ ಸಮೀಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜು ಅವರುಗಳು ಶಂಕುಸ್ಥಾಪನೆ ನೆರವೇರಿಸಿದರು.

ಚಿಕ್ಕಬಳ್ಳಾಪುರದ ಹಾರೋಬಂಡೆ ಕ್ರಾಸ್ ಸಮೀಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡಕ್ಕೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ಆರೋಗ್ಯ, ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ. ಎ. ಬಸವರಾಜು ಅವರುಗಳು ಶಂಕುಸ್ಥಾಪನೆ ನೆರವೇರಿಸಿದರು.
ರಾಷ್ಟ್ರದಲ್ಲಿಯೇ ಕರ್ನಾಟಕದ ಸಹಕಾರ ಇಲಾಖೆಯನ್ನುಮೊದಲ ಸ್ಥಾನಕ್ಕೆ ತರಲು ಶ್ರಮಿಸುವೆ; ಸಚಿವ ಎಸ್ ಟಿ ಎಸ್
Tap to resize

ಆತ್ಮನಿರ್ಭರ ಯೋಜನೆ ಜಾರಿಯಲ್ಲಿ ಕರ್ನಾಟಕವೇ ಮೊದಲು; ಸಚಿವರಾದ ಸೋಮಶೇಖರ್
15 ಲಕ್ಷ ರೈತರಿಗೆ 10 ಸಾವಿರ ಕೋಟಿ ರೂ. ಸಾಲ ವಿತರಣೆ
ಸಚಿವರಾದ ಸೋಮಶೇಖರ್ ಅವರಿಂದ ಉತ್ತಮ ಸಾಧನೆ; ಸಚಿವ ಡಾ.ಸುಧಾಕರ್
67ನೇ ಅಖಿಲ ಭಾರತ ಸಹಕಾರ ಸಪ್ತಾಹ 2020ರ ನಾಲ್ಕನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಸಾರ್ವಜನಿಕರಿಗೆ ಆರ್ಥಿಕ ಬಲ ತುಂಬುವ ಕಾರ್ಯಕ್ಕೆ ಸಹಕಾರ ಇಲಾಖೆ ಮೂಲಕ ಕರ್ನಾಟಕದಲ್ಲಿಯೇ ಮೊದಲು ಚಾಲನೆ ನೀಡಿರುವುದಾಗಿ ಕೇಂದ್ರ ಮಂತ್ರಿಗಳಾದ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದು, ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಚಿವರು ತಿಳಿಸಿದರು.
ಹಿಂದಿನ ಸರ್ಕಾರ ಸಾಲ ಮನ್ನಾ ಘೋಷಣೆ ಮಾಡಿತು. ಆದರೆ, ಬಹುತೇಕ ರೈತ ಫಲಾನುಭವಿಗಳಿಗೆ ಪ್ರಯೋಜನ ಲಭಿಸಿರಲಿಲ್ಲ. 2.30 ಲಕ್ಷ ರೈತರಿಗೆ ಸಾಲ ಮನ್ನಾ ಬಾಕಿ ಇತ್ತು. ಹೀಗಾಗಿ ಒಟ್ಟಾರೆ ಬಾಕಿ ಇದ್ದ 5092 ಕೋಟಿ ರೂಪಾಯಿಯ ಸಾಲ ಮನ್ನಾವನ್ನು ನಮ್ಮ ಸರ್ಕಾರ ಮಾಡಿದೆ. ಇನ್ನು ಚಿಕ್ಕಾಬಳ್ಳಾಪುರ ಹಾಗೂ ಕೋಲಾರದಲ್ಲಿ 40 ಮಂದಿಗೆ ಮಾತ್ರ ಸಾಲಮನ್ನಾ ಬಾಕಿ ಇದ್ದು, ಅದನ್ನು ಸಹ ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ತಿಳಿಸಿದರು.
ಲಕ್ಷಾಂತರ ಮಂದಿಗೆ ಸಹಕಾರ ಕ್ಷೇತ್ರದಿಂದ ಉದ್ಯೋಗ ಸಿಗುತ್ತಿದೆ. ಬೀದರ್ ನಲ್ಲಿ ಸಹಕಾರ ಕ್ಷೇತ್ರದ ವತಿಯಿಂದ ಆಸ್ಪತ್ರೆ ಕಟ್ಟಿಸಿದ್ದು, ಲಕ್ಷಾಂತರ ಮಂದಿಗೆ ಉಪಯೋಗವಾಗುತ್ತಿದೆ. ಬೆಳಗಾವಿಯಲ್ಲಿ ಇಲೆಕ್ಟ್ರಾನಿಕ್ ಉತ್ಪನ್ನಗಳ ಘಟಕವನ್ನು ಪ್ರಾರಂಭಿಸಿ ಸಾಧನೆ ಮಾಡಲಾಗಿದೆ. ಇದೇ ರೀತಿಯಾಗಿ ರಾಜ್ಯದ ವಿವಿಧೆಡೆ ಸಹಕಾರಿಗಳಿಂದ ಹೆಚ್ಚಿನ ಉತ್ತಮ ಕೆಲಸವಾಗುತ್ತಿದೆ ಎಂದು ತಿಳಿಸಿದರು.
ಕೋವಿಡ್ ಸಂದರ್ಭ ಎದುರಾದ ಹಿನ್ನೆಲೆಯಲ್ಲಿ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಸಾಲ ನೀಡುವುದು ಬಹಳ ಕಷ್ಟ ಎಂದೇ ಅಂದಾಜಿಸಲಾಗಿತ್ತು. ಕಳೆದ ವರ್ಷ ನೀಡಲಾಗಿದ್ದ 13500 ಕೋಟಿಯಷ್ಟು ಸಾಲವನ್ನೂ ಸಹ ನೀಡಲು ಕಷ್ಟವಾಗಬಹುದು ಎಂಬ ಆತಂಕದ ನಡುವೆಯೂ ನಾವು 24 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ವಿತರಣೆ ಗುರಿ ಹಾಕಿಕೊಂಡೆವು. ಅದರನ್ವಯ ಈವರೆಗೆ ಅಂದರೆ ನವೆಂಬರ್ 16ರ ವರೆಗೆ 15,22,076 ರೈತರಿಗೆ 9945.82 ಕೋಟಿ ರೂಪಾಯಿ ಸಾಲವನ್ನು ನೀಡಿದ್ದೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.
ಕೋವಿಡ್ 19ರ ಸಂಕಷ್ಟದ ಕಾಲದಲ್ಲಿ ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸಿ 53 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಟ್ಟಿದ್ದೇವೆ. ಇನ್ನು ಕೊರೋನಾ ವಾರಿಯರ್ಸ್ ಗಳಾದ 42600 ಆಶಾ ಕಾರ್ಯಕರ್ತೆಯರಿಗೂ ಸಹ ತಲಾ 3000 ದಂತೆ ಒಟ್ಟು 12.75 ಕೋಟಿ ರೂಪಾಯಿಯನ್ನು ವಿತರಣೆ ಮಾಡಿದ್ದೇವೆ. ಇದು ನೂರಕ್ಕೆ ನೂರರಷ್ಟು ಯಶಸ್ವಿಯಾಗಿದ್ದಕ್ಕೆ ಸಂತಸವಿದೆ ಎಂದು ಸಚಿವರು ತಿಳಿಸಿದರು.

Latest Videos

click me!