ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ; ಹಬ್ಬ ಮುಗಿಸಿ ಬರ್ತಿದ್ದ ನಾಲ್ವರ ದುರ್ಮರಣ

Published : Mar 23, 2026, 07:57 AM IST

ಇಂದು ಮುಂಜಾನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದೆ. ಚಾಲಕನ ನಿದ್ದೆ ಮಂಪರಿನಿಂದ ಡಿವೈಡರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ನಡೆದಿದೆ.

PREV
15
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ

ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಅಪಘಾತಕ್ಕೊಳಗಾದ ಬಸ್ ಕೇರಳದಿಂದ ಬೆಂಗಳೂರಿಗೆ ಬರುತ್ತಿತ್ತು. ಚನ್ನಪಟ್ಟಣ ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಅಪಘಾತ ನಡೆದಿದೆ.

25
ಡಿವೈಡರ್‌ಗೆ ಡಿಕ್ಕಿ

ಚಾಲಕ ನಿದ್ದೆ ಮಂಪರಿನಲ್ಲಿ ಬಸ್, ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೊಳಗಾದ ಬಸ್‌ ಕೇರಳ ಮೂಲದ Pk ಟ್ರಾವೆಲ್ಸ್ ಗೆ ಸೇರಿದ್ದಾಗಿದೆ.

35
ಚಾಲಕನ ಅಜಾಗರೂಕತೆ

ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ವಾಹನ ತೆರವುಗೊಳಿಸಿ ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಅಪಘಾತದಲ್ಲಿ ಕೆಲ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಹ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

45
ಮೃತರು ಕೇರಳ- ಬೆಂಗಳೂರು ಮೂಲದವರು

ಮೃತರನ್ನು ಮಹಮ್ಮದ್ ಪರಾನ್ (22), ರಫೀಜ್ (45) ಇಬ್ಬರೂ ಕೇರಳ ಮೂಲದವರು ಮತ್ತಿಬ್ಬರು ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ರಾತ್ರಿ ಕೇರಳದಿಂದ ಹೊರಟಿದ್ದು ಬಸ್ ಇಂದು ಬೆಳಗ್ಗೆ ಬೆಂಗಳೂರು ತಲುಪಬೇಕಿತ್ತು.

ಇದನ್ನೂ ಓದಿ: ದೇವಸ್ಥಾನದ ನಿಧಿ ದೋಚಿದವನಿಗೆ ಪಾಪಪ್ರಜ್ಞೆ: ಪೊಲೀಸ್ ಠಾಣೆಗೆ ಬಂದು ಶರಣಾದ ಇಳಕಲ್‌ ವ್ಯಕ್ತಿ

55
ಖಾಸಗಿ ಬಸ್

ಅಪಘಾತದಲ್ಲಿ ಅಬ್ದುಲ್ ಹಾಗೂ ಅಲೇಸ್ ಎಂಬವರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ರು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಸಚಿವ ಶಿವರಾಜ್ ತಂಗಡಗಿಗೆ ಎದೆನೋವು: ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲು

Read more Photos on
click me!

Recommended Stories