ಹಾಸನದಲ್ಲಿ ಘೋರ ಕೃತ್ಯ: ಲೈಂಗಿಕ ಕ್ರಿಯೆಗೆ ಒಪ್ಪದಿದ್ದಕ್ಕೆ ಖಾಸಗಿ ಭಾಗಕ್ಕೆ ಒದ್ದು ಹತ್ಯೆ

Published : May 04, 2026, 10:58 AM IST

Hassan: ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಮೃತ ರಮ್ಯಾ ಅವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪಿ ಚಂದ್ರ, ಆಕೆಯ ಖಾಸಗಿ ಭಾಗಕ್ಕೆ ಒದ್ದು ಹಲ್ಲೆ ನಡೆಸಿದ್ದ. ಚಿಕಿತ್ಸೆ ಫಲಕಾರಿಯಾಗದೆ ರಮ್ಯಾ ಮೃತಪಟ್ಟಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

PREV
14
ಹಾಸನ ಪ್ರಕರಣ

ಹಾಸನ: ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಹಿನ್ನೆಲೆ ರೊಚ್ಚಿಗೆದ್ದ ವ್ಯಕ್ತಿ ಮಹಿಳೆಯ ಖಾಸಗಿ ಭಾಗಕ್ಕೆ ಒದ್ದು ಕೊಲೆಗೈದ ಘಟನೆ ತಾಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮ್ಯಾ.ಎ.ಆರ್. (35) ಮೃತ ಮಹಿಳೆಯಾಗಿದ್ದು, ಚಂದ್ರ (41) ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

24
ನಡೆದಿದ್ದೇನು?

ರಮ್ಯಾ ಅವರ ಪತಿ ಉಮೇಶ್ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು, ನಂತರ ರಮ್ಯಾ ಅದೇ ಗ್ರಾಮದ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರೆಂದು ತಿಳಿದುಬಂದಿದೆ. ರಮ್ಯಾ ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಮನೆಯೊಂದರಲ್ಲಿ ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದರು.

34
ಲೈಂಗಿಕ ಕ್ರಿಯೆಗೆ ಒತ್ತಾಯ

ಏಪ್ರಿಲ್ 28ರಂದು ರಮ್ಯಾ ಅವರ ಅತ್ತೆ ಕಾಳಮ್ಮ ನಿಧನರಾದ ಹಿನ್ನೆಲೆಯಲ್ಲಿ, ಅವರು ಬೆಂಗಳೂರಿನಿಂದ ಅತ್ತಿಹಳ್ಳಿ ಗ್ರಾಮಕ್ಕೆ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ನಂತರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಆರೋಪಿಯಾದ ಚಂದ್ರ ಮನೆಗೆ ಬಂದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಇದಕ್ಕೆ ರಮ್ಯಾ ವಿರೋಧ ವ್ಯಕ್ತಪಡಿಸಿದ್ದರಿಂದ ಸಿಟ್ಟಿಗೆದ್ದ ಚಂದ್ರ, ಆಕೆಯ ಮೇಲೆ ಹಲ್ಲೆ ನಡೆಸಿ ಖಾಸಗಿ ಭಾಗಕ್ಕೆ ಕಾಲಿನಿಂದ ಒದ್ದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

44
ಚಿಕಿತ್ಸೆ ಫಲಕಾರಿಯಾಗದೆ ಸಾವು

ಘಟನೆಯ ನಂತರ ಏಪ್ರಿಲ್ 30 ರಂದು ರಮ್ಯಾ ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಂದ್ರನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ.

Read more Photos on
click me!

Recommended Stories