ಹಾಸನ ತಾಲೂಕಿನ ಮೊಸಳೆಹೊಸಳ್ಳಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ ಎಂದು ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.