ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8 ರಿಂದ 10ರವರೆಗೆ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಲು ಎಚ್ಚರಿಸಿದೆ.
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ.8ರಿಂದ 10ರವರೆಗೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಉಡುಪಿ, ಹಾವೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೂ.8ರಿಂದ 10ರ ವರೆಗೆ ಭಾರಿ ಮಳೆಯಾಗಲಿದೆ.
25
ಜೂ.8 ಮತ್ತು 9ಕ್ಕೆ ರೆಡ್ ಅಲರ್ಟ್
ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಇಲಾಖೆ ಎಚ್ಚರಿಸಿದೆ. ಜೂ.8ರಿಂದ 10ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ವಿಶೇಷವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂ.8 ಮತ್ತು 9ಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಜೂ.10ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
35
ಇಂದಿನಿಂದ 10ರ ವರೆಗೆ ಮಳೆ ಮುನ್ಸೂಚನೆ
ಕರಾವಳಿ ಹಾಗೂ ಸಮುದ್ರದಲ್ಲಿ ಗಂಟೆಗೆ 30 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.
ಭಾನುವಾರ ಬೆಳಗ್ಗೆ 8-30ಕ್ಕೆ ಕೊನೆಗೊಂಡ ಕಳೆದ 24 ಗಂಟೆಗಳ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಹಾಗೂ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅತ್ಯಧಿಕ 8 ಸೆಂ.ಮೀ. ಮಳೆಯಾಗಿದೆ. ಉತ್ತರ ಕನ್ನಡದ ಕುಮಟಾ, ದಕ್ಷಿಣ ಕನ್ನಡದ ಶಕ್ತಿನಗರ, ಕೊಡಗಿನ ಸೋಮವಾರಪೇಟೆಯಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ.
55
6 ಸೆಂ.ಮೀ. ಮಳೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಮಂಗಳೂರಿನಲ್ಲಿ ತಲಾ 6 ಸೆಂ.ಮೀ. ಮಳೆಯಾಗಿದ್ದರೆ, ವಿಜಯಪುರದ ಬಿ. ಬಾಗೇವಾಡಿ, ರಾಯಚೂರಿನ ಗಬ್ಬೂರು ಹಾಗೂ ಕಲಬುರಗಿಯ ಸುಲೆಪೇಟೆಯಲ್ಲಿ ತಲಾ 5 ಸೆಂ.ಮೀ. ಮಳೆ ಬಿದ್ದಿದೆ. ಉತ್ತರ ಕನ್ನಡದ ಗೇರುಸೊಪ್ಪ ಮತ್ತು ಗೋಕರ್ಣ, ಧಾರವಾಡದ ಹುಬ್ಬಳ್ಳಿ ಮತ್ತು ಕಲಘಟಗಿ, ಮಂಗಳೂರು ವಿಮಾನ ನಿಲ್ದಾಣ ಹಾಗೂ ಚಿತ್ರದುರ್ಗದ ರಾಮಪುರದಲ್ಲಿ ತಲಾ 4 ಸೆಂ.ಮೀ. ಮಳೆಯಾಗಿದೆ.