ಮರವಂತೆ ಹೊರ ಬಂದರು ಪ್ರದೇಶದಲ್ಲಿ ಬೃಹತ್ ಅಲೆಗಳು ತೀರಕ್ಕಪ್ಪಳಿಸಿವೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಡಲಿನಾರ್ಭಟವೂ ಹೆಚ್ಚಿದೆ
ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ
ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಇದೇ ರೀತಿ ಮುಂದುವರಿದರೆ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಯೂ ಇದೆ.
ಜಿಲ್ಲಾದ್ಯಂತ ಮಳೆ ಬೀಳುತ್ತಿರುವುದರಿಂದ ನೇತ್ರಾವತಿ, ಕುಮಾರಧಾರ, ಫಲ್ಗುಣಿ ನದಿಗಳಲ್ಲಿ ನೀರಿನ ಮಟ್ಟದಿಢೀರ್ ಹೆಚ್ಚಿದೆ.
ಮರವಂತೆಯ ಹೊರಬಂದರಿನಲ್ಲಿ ಅಲೆಗಳು ಅಪ್ಪಳಿಸುವ ದೃಶ್ಯ
ಕರಾವಳಿ ಭಾಗದಲ್ಲಿ 3 ರಿಂದ 3.3 ಮೀಟರ್ ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 18 ಮತ್ತು 19ರಂದು ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.