ಕೊಡಗು ಮಹಾಮಳೆ ಸಂತ್ರಸ್ತರ ಮುಖದಲ್ಲಿ ಮಂದಹಾಸ: ಮನೆ ಹಸ್ತಾಂತರದ ಸಂಭ್ರಮದ ಕ್ಷಣ ಹೀಗಿತ್ತು

Suvarna News   | Asianet News
Published : Jun 05, 2020, 01:04 PM ISTUpdated : Jun 05, 2020, 01:10 PM IST

2018ರಲ್ಲಿ ಭಾರಿ ಮಳೆಯಿಂದ ಭೀಕರ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಮನೆಗಳನ್ನು ಕಳೆದುಕೊಂಡಿದ್ದ 463 ಸಂತ್ರಸ್ತರಿಗೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಹಾಗೂ ಮಡಿಕೇರಿ ತಾಲೂಕಿನ ಮದೆನಾಡಿನಲ್ಲಿ ಸರ್ಕಾರದಿಂದ ಮನೆಗಳನ್ನು ಗುರುವಾರ ಹಸ್ತಾಂತರಿಸಲಾಯಿತು. ಇಲ್ಲಿವೆ ಫೋಟೋಸ್

PREV
112
ಕೊಡಗು ಮಹಾಮಳೆ ಸಂತ್ರಸ್ತರ ಮುಖದಲ್ಲಿ ಮಂದಹಾಸ: ಮನೆ ಹಸ್ತಾಂತರದ ಸಂಭ್ರಮದ ಕ್ಷಣ ಹೀಗಿತ್ತು

ಜಿಲ್ಲಾಡಳಿತ, ರಾಜೀವ್‌ ಗಾಂ​ಧಿ ವಸತಿ ನಿಗಮ ನಿಯಮಿತ ವತಿಯಿಂದ ಪುನರ್ವಸತಿ ಯೋಜನೆ ಅಡಿ ಜಂಬೂರಿನಲ್ಲಿ ಸಂತ್ರಸ್ತರಿಗೆ ನಿರ್ಮಿಸಿರುವ 383 ಹಾಗೂ ಮದೆನಾಡಿನಲ್ಲಿ 80 ಮನೆಗಳನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ಅವರು ಮನೆ ಹಕ್ಕು ಪತ್ರ ಹಾಗೂ ಕೀ ನೀಡುವ ಮೂಲಕ ಗುರುವಾರ ಹಸ್ತಾಂತರಿಸಿದರು.

212

ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಫೀಲ್ಡ್‌ ಮಾರ್ಷಲ್‌ ಕೆ.ಎಂ. ಕಾರ್ಯಪ್ಪ ಬಡಾವಣೆಯಲ್ಲಿ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಿದರು.

312

ಜಿಲ್ಲೆಯಲ್ಲಿ 2018ರ ಆಗಸ್ಟ್‌ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದರು. 

412

ಈ ಸಂತ್ರಸ್ತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಸ್ಥಳ ಗುರುತಿಸಿ ಪ್ರತೀ ಮನೆಗೆ 9.85 ಲಕ್ಷ ರು. ವೆಚ್ಚದಲ್ಲಿ ಎರಡು ಬೆಡ್‌ರೂಮ್‌ ಒಳಗೊಂಡ ಸುಸಜ್ಜಿತ ಮನೆಗಳನ್ನು ನಿರ್ಮಿಸಿದೆ.

512

ಜಂಬೂರಿನಲ್ಲಿ ನಿರ್ಮಿಸಿರುವ ಮನೆಗಳನ್ನು ಮಕ್ಕಂದೂರು, ಹೆಮ್ಮೆತಾಳು, ಮುಕ್ಕೋಡ್ಲು, ಆವಂಡಿ, ಹೊದಕಾನ, ಮೇಘತ್ತಾಳು, ಮಡಿಕೇರಿ ನಗರ, ಹಾಲೇರಿ, ಕಾಂಡನಕೊಲ್ಲಿ, ಹಾಡಗೇರಿ, ಮುವತ್ತೋಕ್ಲು, ಕಡಂದಾಳು, ಗರ್ವಾಲೆ, ಅತ್ತೂರು ನಲ್ಲೂರು, 2 ನೇ ಮೊಣ್ಣಂಗೇರಿ, ಕಣಂರ್‍ಗೇರಿ, ಜೋಡುಪಾಲ, ಮದೆ, ಕಾಟಕೇರಿ ಮತ್ತಿತರ ಗ್ರಾಮದ ಸಂತ್ರಸ್ತರಿಗೆ ಹಸ್ತಾಂತರಿಸಲಾಯಿತು.

612

ಕಣಂರ್‍ಗೇರಿ ಗ್ರಾಮದಲ್ಲಿ ನಿರ್ಮಿಸಿದ 35 ಮನೆಗಳನ್ನು ಈಗಾಗಲೇ ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಅಲ್ಲದೆ ಸ್ವಂತ ಜಾಗದಲ್ಲಿ ಮನೆ ನಿರ್ಮಿಸಿಕೊಳ್ಳಲು ಬಯಸಿದ್ದ 65 ಫಲಾನುಭವಿಗಳಿಗೆ ತಲಾ 9.85 ಲಕ್ಷ ಮೊತ್ತವನ್ನು ಪಾವತಿಸಲಾಗಿದೆ.

712

ಜಿಲ್ಲೆಯಲ್ಲಿ 2018ರ ಆಗಸ್ಟ್‌ನಲ್ಲಿ ಸುರಿದ ಧಾರಾಕಾರ ಮಳೆಗೆ ಸಂತ್ರಸ್ತರಾದ ಕುಟುಂಬಗಳಿಗೆ ಈಗಾಗಲೇ ಕರ್ಣಂಗೇರಿಯಲ್ಲಿ 35 ಮನೆ, ಜಂಬೂರು 383 ಮತ್ತು ಮದೆ ಗ್ರಾಮದ ಬಳಿ 80 ಸೇರಿ ಒಟ್ಟು 498 ಮನೆಗಳನ್ನು ಹಸ್ತಾಂತರಿಸಲಾಗಿದೆ.

812

ಉಳಿದಂತೆ ಬಿಳಿಗೇರಿ ಬಳಿ 22 ಮನೆ, ಗಾಳಿಬೀಡು ಬಳಿ 140 ಮತ್ತು ಕೆ.ನಿಡುಗಣೆ ಬಳಿ 80 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಈ 242 ಮನೆಗಳನ್ನು 6-7 ತಿಂಗಳಲ್ಲಿ ಸಂತ್ರಸ್ತರಿಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

912

ಮನೆ ಹಸ್ತಾಂತರ ಸಂದರ್ಭ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್‌, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ, ಕೊಡಗು ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್‌, ಸಂಸದ ಪ್ರತಾಪ್‌ ಸಿಂಹ, ವಿಧಾನ ಪರಿಷತ್‌ ಸದಸ್ಯರಾದ ಎಂ.ಪಿ. ಸುನೀಲ್‌ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಸೋಮವಾರಪೇಟೆ ತಾ.ಪಂ. ಅಧ್ಯಕ್ಷ ಪುಷ್ಪರಾಜ್‌, ಮಾದಾಪುರ ಗ್ರಾ.ಪಂ. ಅಧ್ಯಕ್ಷೆ ಲತಾ ಎನ್‌., ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ, ರಾಜೀವ್‌ ಗಾಂ​ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ. ರಾಮ್‌ ಪ್ರಸಾಥ್‌ ಮನೋಹರ್‌, ಜಿಲ್ಲಾ​ಧಿಕಾರಿ ಅನೀಸ್‌ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿ​ಕಾರಿ ಸುಮನ್‌ ಡಿ. ಪನ್ನೇಕರ್‌, ಜಿ.ಪಂ. ಸಿಇಒ ಕೆ. ಲಕ್ಷ್ಮೇಪ್ರಿಯ ಇತರರು ಇದ್ದರು.

1012

ಇಸ್ಫೋಸಿಸ್‌ ವತಿಯಿಂದ 250 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಅದನ್ನೂ ಹಸ್ತಾಂತರಿಸಲಾಗುವುದು. ಸರ್ಕಾರ 9.85 ಲಕ್ಷ ರು. ವೆಚ್ಚದಲ್ಲಿ ಸುಸಜ್ಜಿತ ಮನೆಗಳನ್ನು ನಿರ್ಮಿಸಿದ್ದು, ಇದು ರಾಜ್ಯಕ್ಕೆ ಮಾದರಿಯಾಗಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಮನೆ ಮಾರಿಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕೋರಿದರು.

1112

MDK

MDK

1212

MDK

MDK

click me!

Recommended Stories