ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ನಡೆದಿದೆ ಎಂದು ಬಂಧಿತರು ತಿಳಿಸಿದ್ದಾರೆ. ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿಯಲ್ಲಿರುವ ಈ ದಟ್ಟ ಅರಣ್ಯ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದಿರುವುದು ಪೊಲೀಸರ ತನಿಖೆಗೆ ದೊಡ್ಡ ಸವಾಲಾಗಿದೆ. ಸದ್ಯ, ಈ ಪ್ರಕರಣದ ತನಿಖೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ.
₹400 ಕೋಟಿ ದರೋಡೆ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎಂದು ಬಂಧಿತರು ತಿಳಿಸಿದ್ದು, ಸಹ್ಯಾದ್ರಿ ಪರ್ವತ ಶ್ರೇಣಿಯಲ್ಲಿ ಪಶ್ಚಿಮ ಘಟ್ಟಗಳ ಒಂದು ಭಾಗವಾಗಿರುವ ಕರ್ನಾಟಕ-ಗೋವಾ- ಮಹಾರಾಷ್ಟ್ರ ಗಡಿಯಲ್ಲಿ ಹರಡಿರುವ ಚೋರ್ಲಾ ಘಾಟ್ ಅತ್ಯಂತ ದಟ್ಟ ಅರಣ್ಯ ಹಾಗೂ ಪರ್ವತ ಶ್ರೇಣಿ ಹೊಂದಿರುವುದರಿಂದ ಈ ಭಾಗದಲ್ಲಿ ಯಾವುದೇ ಮೊಬೈಲ್ ಕಂಪನಿಗಳ ನೆಟವರ್ಕ್ ಬರುವುದಿಲ್ಲ. ಹೀಗಾಗಿ ಆರೋಪಿಗಳನ್ನು ಟ್ರ್ಯಾಪ್ ಮಾಡಲು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.
25
ಮೊಬೈಲ್ ನೆಟವರ್ಕ್ ಇರಲ್ಲ.
ಬೆಳಗಾವಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಧ್ಯದಲ್ಲಿ ಬರುವ ಈ ಚೋರ್ಲಾ ಘಾಟ್ ಸುಮಾರು 15-20 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ನೆಟವರ್ಕ್ ಇರಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ಖದೀಮರು ದರೋಡೆ ಸ್ಕೆಚ್ ಹಾಕಿರಬಹುದು ಎಂಬ ಅನುಮಾನವೂ ಕಾಡುತ್ತಿದೆ.
35
ಮೂರು ರಾಜ್ಯಕ್ಕೆ ಸೇರಿರುವ ಪ್ರದೇಶ
ಚೋರ್ಲಾ ಘಾಟ್ ಪ್ರದೇಶ ಮೂರು ರಾಜ್ಯಗಳ ವ್ಯಾಪ್ತಿಗೆ ಒಳಪಡುವ ಪ್ರದೇಶವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಾಕ್ಷಿದಾರರು ಯಾರು ಎಂಬ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ರಾಜ್ಯದ ಪೊಲೀಸರು ನಾಸಿಕ್‌ನಲ್ಲೇ ಇದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಈ ಪ್ರಕರಣವು ಮೊದಲಿಗೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂಬ ಕಾರಣದಿಂದ ತನಿಖೆ ಅಲ್ಲಿ ನಡೆಯಬೇಕಾಗಿದೆ. ನಮಗೆ ಇನ್ನೂ ಸಂಪೂರ್ಣ ಮಾಹಿತಿ ಹಂಚಿಕೆಯಾಗಿಲ್ಲ. ಆರೋಪಿಗಳೊಂದಿಗೆ ನೇರವಾಗಿ ಮಾತನಾಡಲು ಅವಕಾಶ ಸಿಕ್ಕಿಲ್ಲ. ಈ ಪ್ರಕರಣದ ತನಿಖೆ ಸರ್ಕಾರದ ಮಟ್ಟದಲ್ಲಿ ನಡೆಯುತ್ತಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ತನಿಖೆಗೆ ಅಗತ್ಯವಿರುವ ಸಂಪೂರ್ಣ ಮಾಹಿತಿ ನಮಗೆ ಇನ್ನೂ ಲಭ್ಯವಾಗಿಲ್ಲ ಎಂದು ತಿಳಿಸಿದರು. ಜ.6ರಂದು ನಮಗೆ ನಾಸಿಕ್ ಪೊಲೀಸರಿಂದ ಪತ್ರ ಬಂದಿದೆ. ಬೆಳಗಾವಿಯ ಸಬ್ ಇನ್‌ಸ್ಪೆಕ್ಟರ್ ನೇತೃತ್ವದ ತಂಡ ಮಹಾರಾಷ್ಟ್ರದ ನಾಸಿಕ್‌ಗೆ ತೆರಳಿದ್ದು, ತನಿಖೆಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.