ಪ್ರಸ್ತುತ ಪ್ರಸ್ತಾಪಿಸಲಾಗಿರುವ ವೇಳಾಪಟ್ಟಿಯ ಪ್ರಕಾರ, ರೈಲು ಯಶವಂತಪುರದಿಂದ ಬೆಳಗ್ಗೆ 7.00 ಗಂಟೆಗೆ ಹೊರಟು ಮಧ್ಯಾಹ್ನ 2.30ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದ್ದು, ಮರುಪ್ರಯಾಣದಲ್ಲಿ ಮಂಗಳೂರಿನಿಂದ ಸಂಜೆ 3.00 ಗಂಟೆಗೆ ಹೊರಟು ರಾತ್ರಿ 10.30ಕ್ಕೆ ಯಶವಂತಪುರ ತಲುಪುವ ನಿರೀಕ್ಷೆಯಿದೆ.
ಆದರೆ ಈ ವೇಳಾಪಟ್ಟಿಯಿಂದಾಗಿ ಕಚೇರಿ, ವಾಣಿಜ್ಯ ಹಾಗೂ ಇತರೆ ತುರ್ತು ಕೆಲಸಗಳಿಗಾಗಿ ಮಂಗಳೂರು ಮತ್ತು ಕರಾವಳಿ ಕರ್ನಾಟಕದಿಂದ ಬೆಂಗಳೂರಿಗೆ ಹಗಲಿನ ವೇಳೆ ಪ್ರಯಾಣಿಸುವ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುವುದಿಲ್ಲ ಎಂದು ಸಮಿತಿ ತಿಳಿಸಿದೆ.