ಮಾಜಿ ಶಾಸಕ ಸುರೇಶ್ ಗೌಡರ ಕಾರ್‌ ಅಪಘಾತ; ಮದುವೆಗೆ ತೆರಳುತ್ತಿದ್ದಾಗ ಪಲ್ಟಿಯಾದ ಕಾರ್

Published : Feb 22, 2026, 09:04 AM IST

ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡರು ಪ್ರಯಾಣಿಸುತ್ತಿದ್ದ ಕಾರು ಮಂಡ್ಯದ ಬೊಂತೆಕೊಪ್ಪಲು ಬಳಿ ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಹಾಗೂ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

PREV
14
ಕಾರ್ ಅಪಘಾತ

ನಾಗಮಂಗಲದ ಜೆಡಿಎಸ್ ಮಾಜಿ ಶಾಸಕರಾದ ಸುರೇಶ್ ಗೌಡರ ಕಾರ್ ಅಪಘಾತಕ್ಕೊಳಗಾಗಿದೆ. ಮಾಜಿ ಶಾಸಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯದ ಬೊಂತೆಕೊಪ್ಪಲು ಸಮೀಪ ಶಾಸಕರು ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿಯಾಗಿದೆ.

24
ಸುರೇಶ್ ಗೌಡರ ಕೈಗೆ ಪೆಟ್ಟು

ಕಾರ್ ಪಲ್ಟಿಯಾದ ಪರಿಣಾಮ ಮಾಜಿ ಶಾಸಕ ಸುರೇಶ್ ಗೌಡರ ಕೈಗೆ ಪೆಟ್ಟಾಗಿದೆ. ಕಾರ್ ಚಾಲಕನಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. ಅಪಘಾತದ ರಭಸಕ್ಕೆ ಕಾರ್ ಭಾಗಶಃ ಜಖಂಗೊಂಡಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.

34
ಮದುವೆಗೆ ತೆರಳುತ್ತಿದ್ದ ಮಾಜಿ ಶಾಸಕರು

ಕಾರು ಪಲ್ಟಿಯಾದ ತಕ್ಷಣ ಮಾಜಿ ಶಾಸಕರ ಗನ್‌ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡರು ಕಾರ್ಯಕರ್ತರೊಬ್ಬರ ಮದುವೆ ಸಂಭ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಕಾರ್ ಅಪಘಾತಕ್ಕೊಳಗಾಗಿದೆ.

ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜು ಕಟ್ಟಡದ 4ನೇ ಮಹಡಿಯ ಕಿಟಕಿಯಿಂದ ಧುಮುಕಿದ ಮು‍‍ಳ್ಳು ಹಂದಿ ಸಾವು

44
ಪ್ರಾಣಾಪಾಯದಿಂದ ಪಾರು

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಾದ ಸುರೇಶ್ ಗೌಡರು ಮತ್ತು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪ್ರಮಾಣದ ಗಾಯಗಳಾಗುವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಲೂಡೊ ಕಾಯಿ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು; ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕೋನ್ ಪತ್ತೆ

Read more Photos on
click me!

Recommended Stories