ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಬೆನ್ನಲ್ಲೇ, ಅವರ ಪುತ್ರ ಜಿ.ಡಿ.ಹರೀಶ್‌ಗೌಡರ ನೇತೃತ್ವದಲ್ಲಿ ಪಕ್ಷವು ಬೃಹತ್ ಕಾರ್ಯಕ್ರಮ ಆಯೋಜಿಸಿದೆ. ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಮಾಜಿ ಸಚಿವರು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ ಜಿ.ಟಿ.ದೇವೇಗೌಡರ ಕ್ಷೇತದಲ್ಲಿಯೇ ಜೆಡಿಎಸ್ ಕಾರ್ಯಕ್ರಮ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದ ಮುಂದಾಳತ್ವವನ್ನು ಜಿ.ಟಿ.ದೇವೇಗೌಡರ ಅವರ ಪುತ್ರ ಜಿ.ಡಿ.ಹರೀಶ್‌ಗೌಡ ತೆಗೆದುಕೊಂಡಿದ್ದಾರೆ.
26
ಜಿ.ಡಿ.ಹರೀಶ್‌ಗೌಡ
ಜಿಡಿ.ಹರೀಶ್‌ಗೌಡ ಮುಂದಾಳತ್ವದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಬೋಗಾದಿಯ ಭೋಗ ನಂದೀಶ್ವರ ದೇವಸ್ಥಾನದ ಬಳಿ ಜೆಡಿಎಸ್ ಪಕ್ಷದ ಕಾರ್ಯಕ್ರಮ ನಡೆಯಲಿದೆ. ಜಿ.ಟಿ.ದೇವೇಗೌಡರನ್ನು ಪಕ್ಕಕ್ಕೆ ಸರಿಸಿ ಈ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ಸಾ.ರಾ.ಮಹೇಶ್ ಬಣದ ನಾಯಕರು ಸೇರಿದಂತೆ ದಳಪತಿಗಳು ಭಾಗಿಯಾಗಲಿದ್ದಾರೆ.
36
ಜಿ.ಟಿ.ದೇವೇಗೌಡರ ನೆಲದಲ್ಲಿಯೇ ತಿರುಗೇಟು
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ, ಇಡೀ ರಾಜ್ಯ ಸುತ್ತಿ ಬಂದಿರುವ ಜನತಾದಳ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿರಲಿದೆ. ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸದ ಸಮಾರೋಪವನ್ನು ಜಿ.ಟಿ.ದೇವೇಗೌಡರ ನೆಲದಲ್ಲಿಯೇ ಆಯೋಜಿಸಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಸಮಾವೇಶದಲ್ಲಿ ಸುಮಾರು 30 ಸಾವಿರ ಜನರು ಸೇರುವ ಸಾಧ್ಯತೆಗಳಿವೆ. ಈ ಮೂಲಕ ಪಕ್ಷದಿಂದ ದೂರವಾಗಿರುವ ಜಿ.ಟಿ.ಡಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಇತ್ತ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರೂ, ಜಿಟಿಡಿ ಕೆಲ ದಿನಗಳ ಹಿಂದೆಯಷ್ಟೇ ಹೆಚ್‌ಡಿ ದೇವೇಗೌಡರನ್ನು ಭೇಟಿ ಮಾಡಿದ್ದರು. ಜಿ.ಟಿ.ದೇವೇಗೌಡರ ಈ ನಡೆಯನ್ನು ಮಾಜಿ ಸಚಿವ ಸಾ.ರಾ.ಮಹೇಶ್ ಟೀಕಿಸಿದ್ದರು.
56
35 ರಿಂದ 40 ಸಾವಿರ ಜನರು ಸೇರುವ ಸಾಧ್ಯತೆ
ಶಾಸಕ ಜಿ.ಡಿ. ಹರೀಶ್ ಗೌಡ ಮಾತನಾಡಿ, ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ, ಸುತ್ತಮುತ್ತಲ ಕ್ಷೇತ್ರದಿಂದ ಜನರು ಬರುತ್ತಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. 35 ರಿಂದ 40 ಸಾವಿರ ಜನರು ಸೇರುವ ಸಾಧ್ಯತೆಯಿದೆ ಎಂದು ತಿಳಿಸಿದರು.
66
ಸಾಮೂಹಿಕ ನಾಯಕತ್ವ
ಶಾಸಕ ಜಿ.ಟಿ.ದೇವೇಗೌಡರು ತಾವು ಮಾಡಿದ ತಪ್ಪನ್ನು ತಿದ್ದಿಕೊಂಡು ಜೆಡಿಎಸ್ ಪಕ್ಷದಲ್ಲೇ ಉಳಿಯುವುದಾದರೆ ನಮ್ಮ ಅಭ್ಯಂತರವೇನೂ ಇಲ್ಲ. . ಜಿ.ಟಿ.ದೇವೇಗೌಡರಿಂದ ಪಕ್ಷಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರು ಒಂದೊಂದು ಚುನಾವಣೆಗೆ ಒಂದೊಂದು ತೀರ್ಮಾನ ಮಾಡುತ್ತಾರೆ. ಅವರ ತೀರ್ಮಾನಗಳಿಂದ ಕಾರ್ಯಕರ್ತರಿಗೆ ಆಘಾತವಾಗಿದೆ. ಈ ಕಾರಣದಿಂದ ಈ ಭಾಗದಲ್ಲಿ ಸಾಮೂಹಿಕ ನಾಯಕತ್ವ ಕಟ್ಟಿಕೊಂಡಿದ್ದೇವೆ ಎಂದು ಸಾ.ರಾ.ಮಹೇಶ್ ಹೇಳಿದ್ದರು.