ಗ್ರಾಮದಲ್ಲಿ ಜರುಗಿದ ಸಮಾರಂಭದಲ್ಲಿ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳು ಹಾಗೂ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ, ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಗೊಂಡ ಪ್ರದೀಪಗೌಡ ಮಾಲಿಪಾಟೀಲ್
ಪ್ರದೀಪಗೌಡ ಮಾಲಿಪಾಟೀಲ್ ಅವರನ್ನು ಕೊಪ್ಪಳ ಜಿಲ್ಲೆಯ ಪಕ್ಷದ ಸ್ಥಳೀಯ ಮುಖಂಡರೊಂದಿಗೆ ಪಕ್ಷದ ಧ್ವಜ ನೀಡುವ ಮೂಲಕ ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಸಂಸದರಾದ ಸಂಗಣ್ಣ ಕರಡಿ ಅವರು ಪ್ರದೀಪ್ ಗೌಡರಿಗೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಹಾಂತೇಶ ಪಾಟೀಲ್ ನಗರಾಭಿವೃದ್ಧಿ ಅಧ್ಯಕ್ಷರು ಹಾಗೂ ಪಕ್ಷದ ಸ್ಥಳೀಯ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.