ಬೆಂಗಳೂರು: ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮೊಳಗಿದ ಕನ್ನಡದ ಹಾಡು..!

First Published | Oct 28, 2022, 2:20 PM IST

ಬೆಂಗಳೂರು(ಅ.28):  67 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣ ಹಾಗೂ ವಿಧಾನಸೌಧದ ಮುಂದೆ ಆಯೋಜಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಕನ್ನಡದ ಆರು ಗೀತೆಗಳನ್ನು ಹಾಡಲಾಗಿದೆ. 

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಬೆಂಗಳೂರಿನಾದ್ಯಂತ ಅದ್ಭುತ ಪ್ರತಿಕ್ರಿಯೆ ಲಭಿಸಿದೆ.(ಚಿತ್ರ ಕೃಪೆ: ಕನ್ನಡಪ್ರಭ: ರವಿ, ಎ. ವೀರಮಣಿ, ರವಿ)
 

ಕನ್ನಡ ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ ವಿನೂತನವಾದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಬೆಂಗಳೂರಿನಾದ್ಯಂತ ಅದ್ಭುತ ಪ್ರತಿಕ್ರಿಯೆ ಲಭಿಸಿದೆ.(ಚಿತ್ರ ಕೃಪೆ: ರವಿ, ಆರ್‌. ವೀರಮಣಿ)

Tap to resize

ಹತ್ತು ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಗಾಯನಕ್ಕಾಗಿ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದವು. 45 ದೇಶಗಳಿಂದ, ದೇಶದ 26 ರಾಜ್ಯಗಳಿಂದ ಜನರು ನೋಂದಣಿ ಮಾಡಿದ್ದರು. 

ಬೆಂಗಳೂರಿನಲ್ಲಿ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಗಮನ ಸೆಳೆದ ವೀರಗಾಸೆ ಹಾಗೂ ವಿವಿಧ ಕಲಾ ತಂಡಗಳು, ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಶಾಲಾ ವಿದ್ಯಾರ್ಥಿಗಳು. 

ಕಂಠೀರವ ಕ್ರೀಡಾಂಗಣ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ, ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹಾಗೂ ಕನ್ನಡ, ಸಂಸ್ಕೃತಿ ಸಚಿವ ಸುನಿಲ್‌ ಕುಮಾರ್‌ ಸೇರಿದಂತೆ ಮತ್ತಿತರು ಕನ್ನಡದ ಹಾಡುಗಳಿಗೆ ದನಿ ಗೂಡಿಸಿದ್ದಾರೆ.

ಕಂಠೀರವ ಕ್ರೀಡಾಂಗಣ ನಡೆದ ಕಾರ್ಯಕ್ರಮದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಕನ್ನಡದ ಬಾವುಟ ಹಾರಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಹುಮ್ಮಸ್ಸು ತುಂಬಿದ ಸಾವಿರಾರು ಜನರು. ಕ್ರೀಡಾಂಗಣದಲ್ಲಿ ಜನರು ಕಿಕ್ಕಿರಿದು ತುಂಬಿದ್ದರು. 

ನಗರದ ಕಲಾಭವದ ಎದುರು ಕುವೆಂಪು ಕಲಾನಿಕೇತನ ಸಂಸ್ಥೆಯಿಂದ ಕನ್ನಡ ಹಾಡುಗಳನ್ನ ಹಾಡುವ ಮೂಲಕ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. 

Latest Videos

click me!