Udupi: ಶ್ರೀ ಕೃಷ್ಣನ ದರ್ಶನ ಪಡೆದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್

First Published Dec 3, 2021, 12:26 PM IST

ಉಡುಪಿ(ಡಿ.03):  ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಇಂದು(ಶುಕ್ರವಾರ) ನಗರದ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನವನ್ನ ಪಡೆದುಕೊಂಡಿದ್ದಾರೆ. 

ಅದಮಾರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ  ನೀಡಿದರು. 

ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕರಾದ ಗೋವಿಂದರಾಜ್, ಶ್ರೀ ಕೃಷ್ಣಾಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಇನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. 

ಬ್ರಹ್ಮಾರ್ಪಣ ನೆರವೇರಿಸಿ ಹಾಗೂ ಅರ್ಚನೆ ಮಾಡಿಸಿದರು ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯ ಪ್ರದಕ್ಷಿಣೆ ಪ್ರದಕ್ಷಿಣೆ ಹಾಕಿ ದೇವರ ಚಿನ್ನದ ರಥ ವೀಕ್ಷಿಸಿದ ರಾಜ್ಯಪಾಲರು

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ, ಎಎಸ್ಪಿ ಕುಮಾರಚಂದ್ರ, ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

click me!