ಹುಬ್ಬಳ್ಳಿಯ NWKRTC ಚೀಫ್ ಮೆಕ್ಯಾನಿಕ್ ಮನೆಯಲ್ಲಿ 40 ಲಕ್ಷ ನಗದು, ಚಿನ್ನಾಭರಣ ಪತ್ತೆ

Published : Jun 16, 2026, 10:27 AM IST

ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯ NWKRTC ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ನಿವಾಸದಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದ್ದು, ಹಲವು ಅಧಿಕಾರಿಗಳ ವಿರುದ್ಧ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದೆ.

PREV
14
ಸಿದ್ದೇಶ್ವರ ಹೆಬ್ಬಾಳ

ಇಂದು ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿರುವ ಹುಬ್ಬಳ್ಳಿಯ NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಮನೆಯಲ್ಲಿ ಲಕ್ಷಾಂತರ ನಗದು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಸುಮಾರು 40 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

24
ಲೋಕಾಯುಕ್ತ ಅಧಿಕಾರಿಗಳು

ಇಂದು ಬೆಳಗ್ಗೆಯೇ ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಸಿದ್ದೇಶ್ವರ ಹೆಬ್ಬಾಳ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದರು. ಸಿದ್ದೇಶ್ವರ್ ಅವರಿಗೆ ಸಂಬಂಧಿಸಿದ ವಾಹನಗಳ ಪರಿಶೀಲನೆಯನ್ನು ಸಹ ಅಧಿಕಾರಿಗಳು ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

34
ದಾವಣಗೆರೆಯಲ್ಲಿ ಒಟ್ಟು ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ.

1. ಬಯಲು ಸೀಮೆ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಕೃಷ್ಣಾ ನಾಯ್ಕ್

2. NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ

3. ಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ

44
ಕೋಟಿ ಕೋಟಿ ಮೌಲ್ಯದ ಆಸ್ತಿಯ ದಾಖಲೆಗಳು

ಇದೇ ವೇಳೆ ಈ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಬೆಳಗಾವಿ, ಹುಬ್ಬಳ್ಳಿ, ವಿಜಯನಗರ ದಾವಣಗೆರೆಯಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳಿಗೆ ಆರಂಭದಲ್ಲಿಯೇ ಕೋಟಿ ಕೋಟಿ ಮೌಲ್ಯದ ಆಸ್ತಿಯ ದಾಖಲೆಗಳು ಲಭ್ಯವಾಗಿವೆ ಎಂದು ತಿಳಿದು ಬಂದಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿರುವ ಪಂಚಾಯತ್ ರಾಜ್ ಇಲಾಖೆ ನಿವೃತ್ತ ಸುಪರಿಡೆಂಟ್ ಇಂಜಿನಿಯರ್ ಮಾಣಿಕ್ ಕನಕಟ್ಟಿ ವಿರುದ್ಧವೂ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮಾಣಿಕ್ ಕನಕಟ್ಟಿ ಬೀದರ್ ಜಿಲ್ಲೆ ಹಳ್ಳಿ ಖೇಡನಲ್ಲಿ 20 ಎಕರೆ ತೋಟ, ಕಲಬುರಗಿಯಲ್ಲಿ ಎರಡು ಮನೆ ಹೊಂದಿದ್ದಾರೆ. ಸದ್ಯ ಮಾಣಿಕ ಕನಕಟ್ಟಿ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ.

Read more Photos on
click me!

Recommended Stories