ವೃತ್ತಿ ಜೀವನ ಮತ್ತು ಹಿನ್ನೆಲೆ:
2014ರ ಬ್ಯಾಚ್‌ನ ಪೊಲೀಸ್ ಅಧಿಕಾರಿಯಾದ ಬಸವರಾಜ್, ಈ ಹಿಂದೆ ಹುಮನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಕ್ಷ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಕಳೆದ ಎರಡು ವರ್ಷಗಳಿಂದ ಕಲಬುರಗಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಘಟನೆ ನಡೆದ ಸಮಯದಲ್ಲಿ ಪತ್ನಿ ಮತ್ತು ಮಕ್ಕಳು ತವರು ಮನೆಗೆ ಹೋಗಿದ್ದರು ಎನ್ನಲಾಗಿದೆ.
ಸಾವಿನ ಸುತ್ತ ಅನುಮಾನದ ಹುತ್ತ:
ಬಸವರಾಜ್ ಅವರ ಈ ನಿರ್ಧಾರಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತಂದೆ ಶಾಂತಪ್ಪ ಅವರ ಪ್ರಕಾರ, ಬಸವರಾಜ್‌ಗೆ ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವು ಇತ್ತು. ಅಲ್ಲದೆ ಅವರು ಆಗಾಗ ಮದ್ಯಪಾನ ಮಾಡುತ್ತಿದ್ದರು ಎನ್ನಲಾಗಿದೆ. ಆದರೆ, ಒಬ್ಬ ಪೊಲೀಸ್ ಅಧಿಕಾರಿಯಾಗಿ ಕೇವಲ ಹೊಟ್ಟೆ ನೋವಿನ ಕಾರಣಕ್ಕೆ ಆತ್ಮ*ಹ*ತ್ಯೆ ಮಾಡಿಕೊಂಡರಾ ಅಥವಾ ಇದರ ಹಿಂದೆ ವೃತ್ತಿ ಜೀವನದ ಒತ್ತಡ ಅಥವಾ ಬೇರೆನಾದರೂ ಕಾರಣಗಳಿವೆಯೇ ಎಂಬ ಪ್ರಶ್ನೆ ಮೂಡಿದೆ.