ವಾಯುಭಾರ ಕುಸಿತ ಮುಂದಿನ 2 ದಿನ ಭಾರಿ ಮಳೆ! ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಣೆ!

Published : May 17, 2026, 08:34 PM IST

ನೈಋತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ಮುನ್ನವೇ ಮುಂದಿನ 7 ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಚಂಡಮಾರುತದ ಸುಳಿ ಮತ್ತು ವಾಯುಭಾರ ಕುಸಿತದ ಪ್ರಭಾವದಿಂದಾಗಿ ಗದಗ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 'ಎಲ್ಲೋ ಅಲರ್ಟ್' ಘೋಷಿಸಲಾಗಿದೆ.

PREV
16

ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆರ್ಭಟ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. ಬೆಂಗಳೂರು ಹವಾಮಾನ ಕೇಂದ್ರದ ಇತ್ತೀಚಿನ ವರದಿಯ ಪ್ರಕಾರ, ನೈಋತ್ಯ ಮುಂಗಾರು (Monsoon) ಮೇ 26 ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲಿದೆ. ಇದರ ಬೆನ್ನಲ್ಲೇ ಕರ್ನಾಟಕದಾದ್ಯಂತ ಮುಂದಿನ ಏಳು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹಲವೆಡೆ 'ಆಲಿಕಲ್ಲು ಮಳೆ'ಯ (Hailstorm) ಮುನ್ನೆಚ್ಚರಿಕೆ ನೀಡಲಾಗಿದೆ.

26

ಚಂಡಮಾರುತದ ಸುಳಿ ಮತ್ತು ವಾಯುಭಾರ ಕುಸಿತದ ಪ್ರಭಾವ:

ಹವಾಮಾನ ಇಲಾಖೆಯ ವಿಶ್ಲೇಷಣೆಯಂತೆ, ಸದ್ಯ ನೈಋತ್ಯ ಬಂಗಾಳ ಕೊಲ್ಲಿ ಮತ್ತು ತಮಿಳುನಾಡು ಕರಾವಳಿಯ ಮೇಲೆ ಚಂಡಮಾರುತದ ಸುಳಿ (Cyclonic Circulation) ಸಕ್ರಿಯವಾಗಿದೆ. ಇದರ ಜೊತೆಗೆ, ವಿದರ್ಭದಿಂದ ಆರಂಭವಾಗಿ ಒಳನಾಡು ಕರ್ನಾಟಕದ ಮೂಲಕ ಮನ್ನಾರ್ ಕೊಲ್ಲಿಯವರೆಗೆ ವಾಯುಭಾರ ಕುಸಿತದ ಮಾದರಿಯ 'ಟ್ರಫ್' (Trough) ನಿರ್ಮಾಣವಾಗಿದೆ. ಈ ಹವಾಮಾನ ವೈಪರೀತ್ಯಗಳಿಂದಾಗಿ ಸಮುದ್ರದಿಂದ ಭೂಭಾಗದ ಕಡೆಗೆ ತೇವಾಂಶಭರಿತ ಗಾಳಿ ಬೀಸುತ್ತಿದ್ದು, ಮಳೆಯ ತೀವ್ರತೆ ಹೆಚ್ಚಾಗಲಿದೆ.

36

ಯಲ್ಲೋ ಅಲರ್ಟ್, ಭಾರೀ ಮಳೆಯ ಎಚ್ಚರಿಕೆ

ಮೇ 17 ಮತ್ತು 18 ರಂದು ಕರ್ನಾಟಕದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೈಲೈಟ್ ಮಾಡಿದೆ. ವಿಶೇಷವಾಗಿ ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಬೀಳುವ ಸಂಭವವಿದ್ದು, ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರೈತರು ತಮ್ಮ ಬೆಳೆಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

46

ಜಿಲ್ಲಾವಾರು ಮಳೆ ಮುನ್ಸೂಚನೆ:

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 17 ಮತ್ತು 18 ರಂದು ಭಾರಿ ಮಳೆಯಾಗಲಿದೆ. ಇಲ್ಲಿ ಬಿರುಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ.

ಉತ್ತರ ಒಳನಾಡು: ಕೊಪ್ಪಳ, ವಿಜಯಪುರ, ಕಲಬುರಗಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು: ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಭಾಗಗಳಲ್ಲಿ ಮೇ 19 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

56

ಬೆಂಗಳೂರು ಹವಾಮಾನ ವರದಿ:

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ನಂತರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23-24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ವಿಜ್ಞಾನಿ ಡಾ. ರಾಜವೇಲ್ ಮಾಣಿಕಂ ತಿಳಿಸಿದ್ದಾರೆ.

66

ಸಾರ್ವಜನಿಕರಿಗೆ ಸೂಚನೆ:

ಗುಡುಗು ಮತ್ತು ಮಿಂಚಿನ ಸಮಯದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ನಿಲ್ಲಬಾರದು. ಬಿರುಗಾಳಿ ಬೀಸುವಾಗ ವಾಹನ ಸವಾರರು ಎಚ್ಚರಿಕೆಯಿಂದಿರಬೇಕು. ಮುಂಗಾರು ಆರಂಭಕ್ಕೆ ಮುನ್ನವೇ ವಾಯುಭಾರ ಕುಸಿತದ ಪ್ರಭಾವ ಇರುವುದರಿಂದ ಹವಾಮಾನ ಇಲಾಖೆಯು 'ಎಲ್ಲೋ ಅಲರ್ಟ್' ಘೋಷಿಸಿದೆ.

Read more Photos on
click me!

Recommended Stories