ಗೋವಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕಾರವಾರದ ವೈದ್ಯಕೀಯ ವಿದ್ಯಾರ್ಥಿ ಪ್ರೀತಂ ಮೃತಪಟ್ಟಿದ್ದಾರೆ. ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಲಾರಿ ಮತ್ತು ಹಾಲಿನ ಕ್ಯಾಂಟರ್ ನಡುವಿನ ಡಿಕ್ಕಿಯಲ್ಲಿ ಬೈಕ್ ಸವಾರ ಅಬ್ದುಲ್ ರೆಹಮಾನ್ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮೆಡಿಕಲ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಅಪಘಾತದಲ್ಲಿ ಮೃತರಾಗಿದ್ದಾರೆ. ಪ್ರೀತಂ ಮೃತ ವಿದ್ಯಾರ್ಥಿಯಾಗಿದ್ದು, ತಡರಾತ್ರಿ ಗೋವಾದ ಪೋಳೆಂನಲ್ಲಿ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಮೂಲದ ಪ್ರೀತಂ, ಕಾರವಾರದ ಕಾಲೇಜಿನಲ್ಲಿ ಓದುತ್ತಿದ್ದರು. (ಸಾಂದರ್ಭಿಕ ಚಿತ್ರ)
25
ಗೋವಾ ಪೋಳೆಂನ ಕ್ಲೌಡ್ 9 ಹೊಟೇಲ್
ಊಟಕ್ಕಾಗಿ ಗೆಳೆಯರೊಂದಿಗೆ ಗೋವಾದ ಪೋಳೆಂಗೆ ತೆರಳಿದ್ದರು. ಊಟ ಮಾಡಿ ಹಿಂದಿರುಗುವಾಗ ಗೋವಾ ಪೋಳೆಂನ ಕ್ಲೌಡ್ 9 ಹೊಟೇಲ್ ಬಳಿ ಅಪಘಾತ ಸಂಭವಿಸಿದೆ. ಪ್ರೀತಂ ಜೊತೆಯಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಪ್ರೀತಂ ಕುಟುಂಬಸ್ಥರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. (ಸಾಂದರ್ಭಿಕ ಚಿತ್ರ)
35
ರಾಯಚೂರು ಅಪಘಾತ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಲಾರಿ ಮತ್ತು ಹಾಲಿನ ಕ್ಯಾಂಟರ್ ನಡುವೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಅಪಘಾತದ ವೇಳೆ ಪಕ್ಕದಲ್ಲಿಯೇ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಅಪಘಾತದಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮೃತ ಬೈಕ್ ಸವಾರನನ್ನು 23 ವರ್ಷದ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ಗೊಬ್ಬರದ ಲಾರಿ ಸಿಂಧನೂರಿನಿಂದ ಹಂಚಿನಾಳ ಮಾರ್ಗವಾಗಿ ಹೊರಟಿತ್ತು. ಹಾಲಿನ ಟ್ಯಾಂಕರ್ ಸಿಂಧನೂರು ಕಡೆ ತೆರಳುತ್ತಿತ್ತು. ಘಟನೆಯಲ್ಲಿ ಲಾರಿ ಹಾಗೂ ಕ್ಯಾಂಟರ್ ಚಾಲಕರಿಬ್ಬರೂ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತ ನಡೆದ ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.