Published : May 18, 2020, 03:28 PM ISTUpdated : May 18, 2020, 06:52 PM IST
ಬೆಂಗಳೂರು(ಮೇ.18): ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರಿಗೆ ಇಂದು(ಮೇ.18) ಹುಟ್ಟುಹಬ್ಬದ ಸಂಭ್ರಮ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ದೇವೇಗೌಡ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಮಾರಕ ಕೊರೋನಾ ವೈರಸ್ ಇರುವ ಹಿನ್ನೆಲೆಯಲ್ಲಿ ಹೆಚ್.ಡಿ.ದೇವೇಗೌಡ ಅವರು ಹುಟ್ಟುಹಬ್ಬದಂದು ತಮ್ಮ ಮನೆ ಬಳಿ ಯಾರೂ ಬರಬೇಡಿ ಎಂದು ಪ್ರಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.