ಕೃಷ್ಣಾ ನದಿ ಹಿಪ್ಪರಗಿ ಬ್ಯಾರೇಜ್ ಗೇಟ್ ಕಟ್: ಸ್ಥಳಕ್ಕೆ ಆರ್.ಬಿ. ತಿಮ್ಮಾಪುರ ಭೇಟಿ, ನದಿಪಾತ್ರದಲ್ಲಿ ಆತಂಕ!

Published : Jan 06, 2026, 06:53 PM IST

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿಯ ಹಿಪ್ಪರಗಿ ಬ್ಯಾರೇಜ್‌ನ 22ನೇ ಗೇಟ್ ನೀರಿನ ಒತ್ತಡಕ್ಕೆ ಮುರಿದುಬಿದ್ದಿದೆ. ಈ ಘಟನೆಯಿಂದಾಗಿ ಅಪಾರ ಪ್ರಮಾಣದ ನೀರು ಕೃಷ್ಣಾ ನದಿಗೆ ಪೋಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿದ್ದಾರೆ.

PREV
16

ಬಾಗಲಕೋಟೆ ಜಿಲ್ಲೆಯ ಜಮಖಂಡಿ (Jamkhandi) ತಾಲ್ಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಹಿಪ್ಪರಗಿ ಬ್ಯಾರೇಜ್‌ನ (Hipparagi Barrage) 22ನೇ ಗೇಟ್ ನೀರಿನ ಒತ್ತಡಕ್ಕೆ ಸಿಲುಕಿ ಮುರಿದು ಬಿದ್ದಿದೆ.

26

ಗೇಟ್‌ನ ಪ್ಲೇಟ್ ಬಿಚ್ಚಿಕೊಂಡ ಪರಿಣಾಮ ಬ್ಯಾರೇಜ್‌ನಲ್ಲಿ ಸಂಗ್ರಹವಾಗಿದ್ದ ಅಪಾರ ಪ್ರಮಾಣದ ನೀರು ಪೋಲಾಗುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

36

ಘಟನೆ ಸಂಭವಿಸುತ್ತಿದ್ದಂತೆಯೇ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರು ಸ್ಥಳಕ್ಕೆ ಭೇಟಿ ನೀಡಿ ಬ್ಯಾರೇಜ್‌ನ ಸ್ಥಿತಿಗತಿಯನ್ನು ಪರಿಶೀಲಿಸಿದರು.

46

ಬಿಚ್ಚಿಕೊಂಡಿರುವ ಗೇಟ್ ಪ್ಲೇಟ್‌ನಿಂದ ಪೋಲಾಗುತ್ತಿರುವ ನೀರನ್ನು ತಡೆಯಲು ಹಾಗೂ ತ್ವರಿತವಾಗಿ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಲು ಸಚಿವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಸಚಿವರಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಜಿ. ಸಂಗಪ್ಪ (DC Janaki KM) ಹಾಗೂ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.

56

ಬ್ಯಾರೇಜ್‌ನಲ್ಲಿ ಒಟ್ಟು 6 ಟಿಎಂಸಿ (6 TMC) ನೀರು ಸಂಗ್ರಹವಿತ್ತು. ಆದರೆ 22ನೇ ಗೇಟ್‌ನ ಪ್ಲೇಟ್ ಬಿಚ್ಚಿಕೊಂಡ ಕಾರಣ ನಿಯಂತ್ರಣವಿಲ್ಲದೆ ನೀರು ನದಿಗೆ ಹರಿದು ಹೋಗುತ್ತಿದೆ. ಜಮಖಂಡಿ ಎಸಿ ಶ್ವೇತಾ ಬೀಡಿಕರ್ (AC Shweta Beedikar) ಹಾಗೂ ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ್ ಅವರು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಪ್ಲೇಟ್ ಕೂರಿಸುವ ತಾಂತ್ರಿಕ ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

66

ಪ್ರಸ್ತುತ ಕೃಷ್ಣಾ ನದಿಯಲ್ಲಿ ನೀರಿನ ಹರಿವು ಕಡಿಮೆ ಇರುವುದರಿಂದ, ಬ್ಯಾರೇಜ್ ಗೇಟ್ ಮುರಿದಿದ್ದರೂ ಸಾರ್ವಜನಿಕರಿಗೆ ಯಾವುದೇ ಅಪಾಯವಿಲ್ಲ. ಒಂದು ವೇಳೆ ಮಳೆಗಾಲದಲ್ಲಿ ಈ ಘಟನೆ ನಡೆದಿದ್ದರೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಸಂಣವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಆದರೂ ನದಿ ಪಾತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ. ನೀರಿನ ಪೋಲನ್ನು ತಡೆಯಲು ಜಿಲ್ಲಾಡಳಿತ ಮತ್ತು ನೀರಾವರಿ ಇಲಾಖೆಯ ಎಂಜಿನಿಯರ್‌ಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ.

Read more Photos on
click me!

Recommended Stories